ವ್ಯಾವಹಾರಿಕ ಅರ್ಥಶಾಸ್ತ್ರ–1 ಕೃತಿ ಇಂದು ಬಿಡುಗಡೆ

ಕಲಬುರಗಿ, ಅ.8– ಗೋದುತಾಯಿ ದೊಡ್ಡಪ್ಪ ಅಪ್ಪ ಪದವಿ ಮಹಿಳಾ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸಿದ್ಧಲಿಂಗರೆಡ್ಡಿ ಅವರು ರಚಿಸಿರುವ ‘ವ್ಯಾವಹಾರಿಕ ಅರ್ಥಶಾಸ್ತ್ರ–1’ ಕೃತಿ ಶುಕ್ರವಾರ ಬೆಳಿಗ್ಗೆ 11.30ಕ್ಕೆ ಮಹಾವಿದ್ಯಾಲಯದಲ್ಲಿ ಬಿಡುಗಡೆಯಾಗಲಿದೆ.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ಪದವಿ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ಡಾ. ಬಸವರಾಜ ಕುಮೂನೂರು ಅವರು ಕೃತಿ ಪರಿಚಯ ಮಾಡಿಕೊಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶರಣಬಸವೇಶ್ವರ ದೇವಸ್ಥಾನ ಆವರಣದ ಶಾಲಾ–ಕಾಲೇಜುಗಳ ನಿರ್ದೇಶಕಿ ಡಾ. ನೀಲಾಂಬಿಕಾ ಶೇರಿಕಾರ, ಗೌರವ ಉಪಸ್ಥಿತಿಯಾಗಿ ಗೋದುತಾಯಿ ಬಿ.ಎಡ್. ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಕಲ್ಪನಾ ಭೀಮಳ್ಳಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋದುತಾಯಿ ದೊಡ್ಡಪ್ಪ ಅಪ್ಪ ಪದವಿ ಮಹಿಳಾ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಸೀಮಾ ಪಾಟೀಲ ವಹಿಸಲಿದ್ದಾರೆ.



