ನಾಳೆಯಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕಾರ್ಯಕರ್ತರ ಸಭೆ ಆರಂಭ
ಉದ್ಘಾಟನಾ ಸಭೆಗಳು ಅಕ್ಟೋಬರ್ ೨೪ರಿಂದ ೨೬ರವರೆಗೆ ಜಿಲ್ಲೆಯ ವಿವಿಧೆಡೆ ಆಯೋಜನೆ

ಬೀದರ್, ಅ. ೨೨: ಸಂಘಟನ್ ಸೃಜನ್ ಅಭಿಯಾನ–೨ರ ಅಂಗವಾಗಿ ಅಕ್ಟೋಬರ್ ೨೪ರಿಂದ ೨೬ರವರೆಗೆ ಜಿಲ್ಲೆಯ ವಿವಿಧೆಡೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕಾರ್ಯಕರ್ತರ ಸಭೆಗಳನ್ನು ಆಯೋಜಿಸಲಾಗಿದೆ ಎಂದು ಕೆಪಿಸಿಸಿ ವೀಕ್ಷಕಿ ಜ್ಯೋತಿ ಮರಗೋಳ ತಿಳಿಸಿದ್ದಾರೆ.
ಅಕ್ಟೋಬರ್ ೨೪ರಂದು ಬೆಳಿಗ್ಗೆ ೧೧ ಗಂಟೆಗೆ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಗದಲ್ ಗ್ರಾಮದ ಸ್ಟಾರ್ ಫಂಕ್ಷನ್ ಹಾಲ್ನಲ್ಲಿ ಸಭೆ ನಡೆಯಲಿದೆ. ಮಧ್ಯಾಹ್ನ ೨.೩೦ಕ್ಕೆ ಹುಮನಾಬಾದ್ನ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಸಭೆ ಆಯೋಜಿಸಲಾಗಿದೆ.
ಅಕ್ಟೋಬರ್ ೨೫ರಂದು ಬೆಳಿಗ್ಗೆ ೧೧ ಗಂಟೆಗೆ ಭಾಲ್ಕಿಯ ಬಿ.ಕೆ.ಐ.ಟಿ.ಯಲ್ಲಿ ಹಾಗೂ ಮಧ್ಯಾಹ್ನ ೨.೩೦ಕ್ಕೆ ಬಸವಕಲ್ಯಾಣದ ಸಹಲಿ ಫಂಕ್ಷನ್ ಹಾಲ್ನಲ್ಲಿ ಸಭೆ ನಡೆಯಲಿದೆ. ಅಕ್ಟೋಬರ್ ೨೬ರಂದು ಬೆಳಿಗ್ಗೆ ೧೧ ಗಂಟೆಗೆ ಔರಾದ್ನ ನಾಗಮಾರಪಳ್ಳಿ ಫಂಕ್ಷನ್ ಹಾಲ್ನಲ್ಲಿ ಸಭೆ ಆಯೋಜಿಸಲಾಗಿದೆ. ಅದೇ ದಿನ ಮಧ್ಯಾಹ್ನ ೨.೩೦ಕ್ಕೆ ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಮತ್ತೊಂದು ಸಭೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಹೊಸ ಅಧ್ಯಕ್ಷರ ಆಯ್ಕೆಗೆ ಸಭೆ
ಬ್ಲಾಕ್ ಕಾಂಗ್ರೆಸ್ನ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯ ಹಿನ್ನೆಲೆಯಲ್ಲಿ ಈ ಸಭೆಗಳನ್ನು ಹಮ್ಮಿಕೊಳ್ಳಲಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಆಸಕ್ತಿ ಹೊಂದಿರುವವರು ಅರ್ಜಿ ಸಲ್ಲಿಸಲು ಪಕ್ಷದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಜಾರ್ಜ್ ಫರ್ನಾಂಡಿಸ್ (ಮೊ. ೯೬೮೬೫೩೦೭೭೭) ಅಥವಾ ಕಾರ್ಯದರ್ಶಿ ರವೀಂದ್ರ (ಮೊ. ೮೭೨೨೮೦೮೨೩೪) ಅವರನ್ನು ಸಂಪರ್ಕಿಸಬಹುದು.
ಸಭೆಯ ಬಳಿಕ ಬ್ಲಾಕ್ ಕಾಂಗ್ರೆಸ್ನ ನೂತನ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಕಾರ್ಯಕರ್ತರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಲಾಗುವುದು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಸಭೆಗಳಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಜ್ಯೋತಿ ಮರಗೋಳ ಮನವಿ ಮಾಡಿದ್ದಾರೆ.



