ಸಾಂಸ್ಕೃತಿಕ

ವಾಲ್ಮೀಕಿ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರಿಂದ ಮಾಲಾರ್ಪಣೆ

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ರಾಮ ಮಂದಿರ ವೃತ್ತದಲ್ಲಿ ಗಣ್ಯರಿಂದ ಗೌರವ ನಮನ

ಕಲಬುರಗಿ, ಅ. 26: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ಸೋಮವಾರ ನಗರದ ರಾಮ ಮಂದಿರ ವೃತ್ತದಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಹಾಗೂ ನಗರ ಪೊಲೀಸ್ ಆಯುಕ್ತ ಡಾ. ಎಸ್.ಡಿ. ಶರಣಪ್ಪ ಅವರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು, ಉಪ ಪೊಲೀಸ್ ಆಯುಕ್ತ ಶಾಲು, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ ಸೇರಿದಂತೆ ಸಮುದಾಯದ ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

sswnews

https://sswnewskannada.com

Related Articles

Leave a Reply

Your email address will not be published. Required fields are marked *

Back to top button