ಕ್ರೀಡೆ

ಅಂತರಮಹಾವಿದ್ಯಾಲಯ ಚೆಸ್ ಪಂದ್ಯಾವಳಿ: ಗೋದೂತಾಯಿ ಕಾಲೇಜಿಗೆ ದ್ವಿತೀಯ ಸ್ಥಾನ

ಆರು ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಪ್ರಾಚಾರ್ಯರು ಹಾಗೂ ಸಿಬ್ಬಂದಿ ಅಭಿನಂದನೆ

ಕಲಬುರಗಿ, ಅ. 27: ಅಂತರಮಹಾವಿದ್ಯಾಲಯ ಚೆಸ್ ಕ್ರೀಡಾಕೂಟದಲ್ಲಿ ನಗರದ ಗೋದೂತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ಬಿಬಿ ರಜಾ ಮಹಾವಿದ್ಯಾಲಯ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಡೆದ ಚೆಸ್ ಪಂದ್ಯಾವಳಿಯಲ್ಲಿ ಗೋದೂತಾಯಿ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಭಾಗ್ಯವಂತಿ, ದೀಪಿಕಾ, ಪ್ರೇಮಾ, ಶ್ವೇತಾ, ಅಂಬಿಕಾ ಮತ್ತು ರಾಧಿಕಾ ಪ್ರಶಸ್ತಿ ಪಡೆದು ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ.

ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕಿ ಡಾ. ರಾಜಲಕ್ಷ್ಮಿ ಡಿ. ಅವರು ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದ್ದರು. ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿನಿಯರು ಉತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ವಿದ್ಯಾರ್ಥಿನಿಯರ ಸಾಧನೆಗೆ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಸೀಮಾ ಪಾಟೀಲ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿಯೂ ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡುವಂತೆ ಹಾರೈಸಿದ್ದಾರೆ.

sswnews

https://sswnewskannada.com

Related Articles

Leave a Reply

Your email address will not be published. Required fields are marked *

Back to top button