ಜಿಲ್ಲಾಸುದ್ದಿರಾಜಕೀಯ

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಇಂದಿರಾ ಗಾಂಧಿ, ಸರ್ದಾರ್ ಪಟೇಲ್ ಜನ್ಮದಿನಾಚರಣೆ

ಅ. 31ರಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ; ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಡಾ. ಕಿರಣ್ ದೇಶಮುಖ್ ಮನವಿ

ಕಲಬುರಗಿ, ಅ. 29: ಇಲ್ಲಿನ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಅಕ್ಟೋಬರ್ 31ರಂದು ಬೆಳಿಗ್ಗೆ 10 ಗಂಟೆಗೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಹಾಗೂ ಭಾರತದ ಉಕ್ಕಿನ ಮನುಷ್ಯ ಎಂದೇ ಪ್ರಸಿದ್ಧರಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಕಿರಣ್ ದೇಶಮುಖ್ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಹಾಲಿ ಮತ್ತು ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರು, ಪಕ್ಷದ ಮುಖಂಡರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಲಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಪಕ್ಷದ ವಿವಿಧ ಮುಂಚೂಣಿ ಘಟಕಗಳು ಹಾಗೂ ವಿಭಾಗಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.

ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಹಾಲಿ ಹಾಗೂ ಮಾಜಿ ಚುನಾಯಿತ ಪ್ರತಿನಿಧಿಗಳು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಹಾಲಿ ಮತ್ತು ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಮಹಾನಗರ ಪಾಲಿಕೆಯ ಹಾಲಿ ಮತ್ತು ಮಾಜಿ ಮಹಾಪೌರರು, ಉಪಮಹಾಪೌರರು ಮತ್ತು ಸದಸ್ಯರು ಸೇರಿದಂತೆ ಮಹಿಳಾ ಮತ್ತು ಯುವ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಡಾ. ಕಿರಣ್ ದೇಶಮುಖ್ ಮನವಿ ಮಾಡಿದ್ದಾರೆ.

sswnews

https://sswnewskannada.com

Related Articles

Leave a Reply

Your email address will not be published. Required fields are marked *

Back to top button