ಅಪರಾಧ

ದಲಿತ ಮಹಿಳೆ ಮೇಲೆ ಹಲ್ಲೆ: ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆಂಬ ಆರೋಪ; ಸಂತ್ರಸ್ತೆಗೆ ನ್ಯಾಯ ಒದಗಿಸಲು ಒತ್ತಾಯ

ಜೆವರ್ಗಿ, ಅ. 30: ಪಟ್ಟಣದ ಲಕ್ಕಪ್ಪ ಲೇಔಟ್ ನಿವಾಸಿ ಬಸವಂತಮ್ಮ ಅವರ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂತ್ರಸ್ತೆ ಆಗ್ರಹಿಸಿದ್ದಾರೆ.

ಮನೆಯ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಮುತಣ್ಣ, ದೇವಮ್ಮ ಹಾಗೂ ನಾಗಮ್ಮ ಎಂಬವರು ವಿನಾಕಾರಣ ಜಗಳ ತೆಗೆದು, ತಮ್ಮ ಮೈಮೇಲಿನ ಬಟ್ಟೆ ಎಳೆದು, ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಬಸವಂತಮ್ಮ ಆರೋಪಿಸಿದ್ದಾರೆ.

ಈ ಸಂಬಂಧ ಅಮಲಪ್ಪ ಹಾಗೂ ವಿಜಯಲಕ್ಷ್ಮೀ ಮಲ್ಲಿಕಾರ್ಜುನ ಆಂದೋಲಾ ಅವರು ಮಧ್ಯಪ್ರವೇಶಿಸಿ ಜಗಳ ಬಿಡಿಸಿದ್ದಾರೆ ಎನ್ನಲಾಗಿದೆ. ಹಲ್ಲೆ ನಡೆಸಿದವರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕು ಎಂದು ಸಂತ್ರಸ್ತೆ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಬಸವರಾಜ್ ಬುಲೆಟ್, ವಕೀಲ ಸಂಗೂ ಹರನೂರ, ವಿಶ್ವಾರಾಧ್ಯ ಗೋಪಾಳಕರ, ಮಲ್ಲು ಗುಡೂರು, ರಾಜು ಜಾಧವ್, ಖಲೀದ್ ಕಟ್ಟಿಸಂಗಾವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button