ರಾಜಕೀಯ

ನವದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿ ಮಾಡಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಾಂಗ್ರೆಸ್ ಸಂಘಟನೆ ಬಲವರ್ಧನೆ, ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ

ಕಲಬುರಗಿ, ನ. ೩: ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಮಂಗಳವಾರ ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸೌಹಾರ್ದಯುತ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಪ್ರಸ್ತುತ ರಾಜಕೀಯ ಬೆಳವಣಿಗೆಗಳು ಹಾಗೂ ಮುಂಬರುವ ದಿನಗಳಲ್ಲಿ ಪಕ್ಷದ ಸಂಘಟನೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುವ ಕಾರ್ಯತಂತ್ರಗಳ ಕುರಿತು ಚರ್ಚಿಸಲಾಯಿತು ಎಂದು ಶಾಸಕ ಅಲ್ಲಮಪ್ರಭು ಪಾಟೀಲ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button