ಶಿಕ್ಷಣ
ಜಾನಪದ ಗೀತೆ ಸ್ಪರ್ಧೆ: ಗೋದೂತಾಯಿ ಕಾಲೇಜು ವಿದ್ಯಾರ್ಥಿನಿಯರಿಗೆ ಪ್ರಥಮ ಸ್ಥಾನ
ಜಿಲ್ಲಾಮಟ್ಟದ ದೇಶಭಕ್ತಿ ಮತ್ತು ಜಾನಪದ ಗೀತೆ ಸ್ಪರ್ಧೆಯಲ್ಲಿ ಸಾಧನೆ

ಕಲಬುರಗಿ, ನ. ೪: ಶಾಲಾ ಶಿಕ್ಷಣ ಇಲಾಖೆ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಲಬುರಗಿ ಜಿಲ್ಲಾ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ದೇಶಭಕ್ತಿ ಗೀತೆ ಗಾಯನ ಮತ್ತು ಜಾನಪದ ಗೀತೆ ಸ್ಪರ್ಧೆಯಲ್ಲಿ ನಗರದ ಗೋದೂತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಗಳಿಸಿದ್ದಾರೆ.
ಅಫಜಲಪುರ ರಸ್ತೆಯ ಮೌಂಟ್ ಲಿಟರಾ ಝೀ ಶಾಲೆಯಲ್ಲಿ ಸೋಮವಾರ ನಡೆದ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿಯರು ತಮ್ಮ ಗಾಯನ ಪ್ರತಿಭೆ ಪ್ರದರ್ಶಿಸಿ ಈ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿನಿಯರ ಸಾಧನೆಗೆ ಮಹಾವಿದ್ಯಾಲಯದ ಸ್ಕೌಟ್ಸ್ ಮತ್ತು ಗೈಡ್ಸ್ ಸಂಯೋಜಕರಾದ ಡಾ. ರಾಜಲಕ್ಷ್ಮಿ ಹಾಗೂ ಶ್ರೀಮತಿ ಪ್ರಭಾವತಿ ಸಹಕರಿಸಿದ್ದಾರೆ.
ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಸೀಮಾ ಪಾಟೀಲ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿನಿಯರ ಸಾಧನೆಯನ್ನು ಅಭಿನಂದಿಸಿದ್ದಾರೆ.



