ಜಿಲ್ಲಾಸುದ್ದಿ

ಕೃಷಿಕಲ್ಪ ಸೆಂಟರ್ ಆಫ್ ಎಕ್ಸಲೆನ್ಸ್ ನೂತನ ಕಚೇರಿ ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ, ನ.14: ಕೃಷಿ ಉದ್ಯಮಕ್ಕೆ ಮೌಲ್ಯವರ್ಧಿತ ಸೇವೆಗಳನ್ನು ಒದಗಿಸುವ ಹಾಗೂ ಉದ್ಯಮಶೀಲತೆಗೆ ಅಗತ್ಯ ಮಾರ್ಗದರ್ಶನ ನೀಡುವ ಉದ್ದೇಶದಿಂದ ಕಲಬುರಗಿ ನಗರದ ಗಾಜಿಪುರ ಚಕ್ಕರ್ ಕಟ್ಟಾ ಪ್ರದೇಶದಲ್ಲಿ ಸ್ಥಾಪಿಸಲಾಗಿರುವ ಕೃಷಿಕಲ್ಪ ಸೆಂಟರ್ ಆಫ್ ಎಕ್ಸಲೆನ್ಸ್‌ನ ನೂತನ ಕಚೇರಿಯನ್ನು ರಾಜ್ಯದ ಗೃಹ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಇಲಾಖೆಯ ಸಚಿವ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದರು.

ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಇನ್ನೋವೇಶನ್ ಆ್ಯಂಡ್ ಟೆಕ್ನಾಲಜಿ ಸೊಸೈಟಿಯ (ಕಿಟ್ಸ್) ಲೀಪ್ ಯೋಜನೆಯಡಿ ಆರ್ಥಿಕ ಸಹಕಾರದೊಂದಿಗೆ ಕೃಷಿಕಲ್ಪ ಫೌಂಡೇಶನ್ ಈ ‘ಸೆಂಟರ್ ಆಫ್ ಎಕ್ಸಲೆನ್ಸ್ ಇಂಕ್ಯುಬೇಷನ್ ಸೆಂಟರ್’ ಅನ್ನು ನಿರ್ವಹಿಸುತ್ತಿದೆ.

ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ಅಧ್ಯಕ್ಷೆ ಹಾಗೂ ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ ಕನೀಜ್ ಫಾತೀಮಾ, ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ತಿಮ್ಮಣ್ಣಪ್ಪ ಕಮಕನೂರ ಮತ್ತು ಜಗದೇವ ಗುತ್ತೇದಾರ್, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸೈಯ್ಯದ್ ಮಹೆಮೂದ್ ಚಿಸ್ತಿ ಸಾಹೇಬ್ ಉಪಸ್ಥಿತರಿದ್ದರು.

ಇದಲ್ಲದೆ, ಐಜಿಪಿ ಶಾಂತನು ಸಿನ್ಹಾ, ಜಿಲ್ಲಾಧಿಕಾರಿ ಇಕ್ರಂ ಶರೀಫ್, ನಗರ ಪೊಲೀಸ್ ಆಯುಕ್ತ ಡಾ. ಎಸ್.ಡಿ. ಶರಣಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಡಿಸಿಪಿ ಶಾಲೂ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಸಂಕನೂರ, ಮಹಾನಗರ ಪಾಲಿಕೆ ಆಯುಕ್ತ ಪಿ. ಶ್ರವಣಕುಮಾರ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಯು.ಕೆ. ಆ್ಯಂಡ್ ಕಂಪನಿಯ ಸಂಸ್ಥಾಪಕ ಡಾ. ಕೆ. ಉಲ್ಲಾಸ ಕಾಮತ್, ಕೃಷಿಕಲ್ಪದ ಅಧ್ಯಕ್ಷರು ಹಾಗೂ ಸಂಸ್ಥಾಪಕ ಪಾಲುದಾರರಾದ ಡಾ. ಪ್ರಶಾಂತ ಪ್ರಕಾಶ, ಸತ್ವ ಕನ್ಸಲ್ಟಿಂಗ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕೃಷ್ಣ ಶ್ರೀಧರ ಮತ್ತು ಕೃಷಿಕಲ್ಪದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಎಂ. ಪಾಟೀಲ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button