ಜಿಲ್ಲಾಸುದ್ದಿ

ಚಿಂಚೋಳಿ ತಾಲ್ಲೂಕಿನ ಜಿಲವರ್ಷ-ಶಾದಿಪುರ ರಸ್ತೆ ಅಪಘಾತ; ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಸಾಗಿಸಿದ ವಿದ್ಯಾರ್ಥಿ

ಚಿಂಚೋಳಿ, ನ.16: ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ 60 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಾಲ್ಲೂಕಿನ ಜಿಲವರ್ಷ ಮತ್ತು ಶಾದಿಪುರ ಗ್ರಾಮಗಳ ನಡುವಿನ ರಸ್ತೆಯಲ್ಲಿ ಭಾನುವಾರ ಸಂಜೆ ನಡೆದಿದೆ.

ಶಾದಿಪುರ ಗ್ರಾಮದ ಶೌಕತ್ ಅಲಿ ನಿಜಾಮುದ್ದೀನ್ (60) ಮೃತಪಟ್ಟವರು. ಶಾದಿಪುರದ ಜವಾಹರ್ ನಗರ ತಾಂಡಾದ ಗೋಪಾಲ ಧರ್ಮು ಚವ್ಹಾಣ ಗಂಭೀರವಾಗಿ ಗಾಯಗೊಂಡಿದ್ದು, ಕುಂಚಾವರಂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತದಲ್ಲಿ ಶೌಕತ್ ಅಲಿ ಅವರ ಮೂಗಿನಿಂದ ರಕ್ತಸ್ರಾವವಾಗಿದ್ದು, ಉಸಿರಾಟದ ತೊಂದರೆಯೂ ಕಾಣಿಸಿಕೊಂಡಿತ್ತು. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ. ಗೋಪಾಲ ಚವ್ಹಾಣ ಅವರ ಸ್ಥಿತಿಯೂ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಈ ಕುರಿತು ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತ ನಡೆದ ಸ್ಥಳದಲ್ಲಿದ್ದ ಶಾದಿಪುರದ ಬಿ.ಎಸ್ಸಿ. ನರ್ಸಿಂಗ್ ವಿದ್ಯಾರ್ಥಿ ವಿಕ್ರಂ ಕಸ್ತಲಾ ಅವರು ಗಾಯಾಳುಗಳಿಗೆ ತಕ್ಷಣ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಆಂಬುಲೆನ್ಸ್ ಸಮಯಕ್ಕೆ ಬಾರದ ಹಿನ್ನೆಲೆಯಲ್ಲಿ ಆಟೊ ವ್ಯವಸ್ಥೆ ಮಾಡಿ ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ ಎಂದು ತಿಳಿದುಬಂದಿದೆ.

Related Articles

Leave a Reply

Your email address will not be published. Required fields are marked *

Back to top button