ಅಪಘಾತ

ಟಿಪ್ಪರ್–ಬೈಕ್ ಡಿಕ್ಕಿ: ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ

ಕಮಲಾಪುರ ಸಮೀಪದ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕ್ರಿಕೆಟ್ ಆಡಲು ತೆರಳಿದ್ದ ವಿದ್ಯಾರ್ಥಿಯ ಜೀವಬಲಿ

ಪಟ್ಟಣದ ಹೊರವಲಯದ ಟೈರ್ ಫ್ಯಾಕ್ಟರಿ ಸಮೀಪದ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಕಲಬುರಗಿಯ ಖಮರ್ ಕಾಲೋನಿ ನಿವಾಸಿ ಹಾಗೂ ಕೆಬಿಎನ್ ಕಾಲೇಜಿನ ಬಿಇ (ಇ&ಸಿ) ದ್ವಿತೀಯ ವರ್ಷದ ವಿದ್ಯಾರ್ಥಿ ಮೊಹಮ್ಮದ್ ಅಹ್ಮದ್ ಎಂದು ಗುರುತಿಸಲಾಗಿದೆ.

ಮೊಹಮ್ಮದ್ ಅಹ್ಮದ್ ಅವರು ಸ್ನೇಹಿತರೊಂದಿಗೆ ಕಮಲಾಪುರಕ್ಕೆ ಕ್ರಿಕೆಟ್ ಆಡಲು ತೆರಳಿದ್ದ ವೇಳೆ ಸಂಜೆ ಸುಮಾರು 5.15ರ ವೇಳೆಗೆ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿದು ಕುಟುಂಬಸ್ಥರು ಸ್ಥಳಕ್ಕೆ ಧಾವಿಸಿದ್ದು, ಮೊಹಮ್ಮದ್ ಅಹ್ಮದ್ ಮೃತಪಟ್ಟಿರುವುದು ದೃಢಪಟ್ಟಿದೆ.

ಈ ಸಂಬಂಧ ಮೃತರ ಸಂಬಂಧಿಕ ಬಾಬು ಕರೀಂ ಅವರ ದೂರಿನ ಮೇರೆಗೆ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button