ಆ. 9ರಂದು ಕಲಬುರಗಿಯಲ್ಲಿ ‘ಕ್ವಿಟ್ ಇಂಡಿಯಾ’ ಚಳವಳಿ ಕಾರ್ಯಕ್ರಮ
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬೆಳಿಗ್ಗೆ 10ಕ್ಕೆ ಕಾರ್ಯಕ್ರಮ; ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ಕರೆ

ಕಲಬುರಗಿ, ಆ. 8: ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಆಗಸ್ಟ್ 9ರಂದು ಬೆಳಿಗ್ಗೆ 10 ಗಂಟೆಗೆ ‘ಕ್ವಿಟ್ ಇಂಡಿಯಾ’ ಚಳವಳಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಕಾಳಗಿ ತಿಳಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟದ ಮಹತ್ವವನ್ನು ಸ್ಮರಿಸುವ ಉದ್ದೇಶದಿಂದ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ-ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರು, ಪಕ್ಷದ ಮುಖಂಡರು, ಕೆಪಿಸಿಸಿ ಮತ್ತು ಡಿಸಿಸಿ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಲಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷರು, ಡಿಸಿಸಿ ಡೆಲಿಗೇಟ್ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿಯ ವಿವಿಧ ಮುಂಚೂಣಿ ಘಟಕಗಳು ಮತ್ತು ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸೂಚಿಸಲಾಗಿದೆ.
ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾಯಿತ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಎಪಿಎಂಸಿಗಳ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಮಹಾನಗರ ಪಾಲಿಕೆಯ ಹಾಲಿ ಹಾಗೂ ಮಾಜಿ ಮಹಾಪೌರರು, ಉಪಮಹಾಪೌರರು ಹಾಗೂ ಸದಸ್ಯರು, ಮಹಿಳಾ ಕಾಂಗ್ರೆಸ್ ಮುಖಂಡರು, ಯುವ ಕಾಂಗ್ರೆಸ್ ಮುಖಂಡರು, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಜಗದೇವ ಗುತ್ತೇದಾರ ಕಾಳಗಿ ಮನವಿ ಮಾಡಿದ್ದಾರೆ.
ಕ್ವಿಟ್ ಇಂಡಿಯಾ ಚಳವಳಿಯ ಐತಿಹಾಸಿಕ ಮಹತ್ವವನ್ನು ಸ್ಮರಿಸುವ ಜೊತೆಗೆ ಪ್ರಜಾಪ್ರಭುತ್ವ, ಸ್ವಾತಂತ್ರ್ಯ ಹಾಗೂ ದೇಶದ ಏಕತೆಗಾಗಿ ಕಾಂಗ್ರೆಸ್ ಪಕ್ಷದ ಕೊಡುಗೆಯನ್ನು ನೆನಪಿಸಿಕೊಳ್ಳಲು ಕಾರ್ಯಕ್ರಮವು ವೇದಿಕೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.



