ಅಪರಾಧ

ಓಡಗಿಯಲ್ಲಿ ಯುವಕನ ಹತ್ಯೆ: ಜೆಸಿಬಿ ಚಾಲಕ ನಬಿ ಬಂಧನ

ವಾಹನ ಓವರ್‌ಟೇಕ್ ವಿಚಾರದಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ

ಸೇಡಂ, ಆ.11: ಕ್ಷುಲ್ಲಕ ಕಾರಣಕ್ಕೆ ಯುವಕನ ಕೆನ್ನೆಗೆ ಹೊಡೆದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿರುವ ಘಟನೆ ಸೇಡಂ ತಾಲೂಕಿನ ಓಡಗಿ ಗ್ರಾಮದಲ್ಲಿ ನಡೆದಿದೆ.

ಮೃತ ಯುವಕನನ್ನು ಓಡಗಿ ಗ್ರಾಮದ ಭಾಗ್ಯವಂತ (24) ಎಂದು ಗುರುತಿಸಲಾಗಿದೆ. ವಾಹನ ಓವರ್‌ಟೇಕ್ ಮಾಡುವ ವಿಚಾರದಲ್ಲಿ ಭಾಗ್ಯವಂತ ಹಾಗೂ ಜೆಸಿಬಿ ಚಾಲಕ ನಬಿ ನಡುವೆ ಜಗಳ ಆರಂಭವಾಗಿತ್ತು. ಮಾತಿಗೆ ಮಾತು ಬೆಳೆದಾಗ ಭಾಗ್ಯವಂತ, ನಬಿ ಅವರ ಶರ್ಟ್‌ನ ಕಾಲರ್ ಹಿಡಿದಿದ್ದಾನೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ನಬಿ, ಭಾಗ್ಯವಂತನ ಕೆನ್ನೆಗೆ ಜೋರಾಗಿ ಹೊಡೆದಿದ್ದಾನೆ.

ಹಲ್ಲೆಯ ರಭಸಕ್ಕೆ ಭಾಗ್ಯವಂತನ ಕೆನ್ನೆಗೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ಬಳಿಕ ಪೊಲೀಸರು ಆರೋಪಿ ನಬಿಯನ್ನು ಬಂಧಿಸಿದ್ದಾರೆ.

ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button