ರಾಜಕೀಯ

ಕಲಬುರಗಿಯಲ್ಲಿ ಆ.20ರಂದು ರಾಜೀವಗಾಂಧಿ, ದೇವರಾಜ ಅರಸು ಜನ್ಮದಿನಾಚರಣೆ

ಕಾಂಗ್ರೆಸ್ ಕಚೇರಿಯಲ್ಲಿ ಬೆಳಿಗ್ಗೆ 10ಕ್ಕೆ ಕಾರ್ಯಕ್ರಮ: ಹೆಚ್ಚಿನ ಸಂಖ್ಯೆಯಲ್ಲಿ ಮುಖಂಡರು, ಕಾರ್ಯಕರ್ತರು ಭಾಗವಹಿಸಲು ಜಗದೇವ ಗುತ್ತೇದಾರ ಕಾಳಗಿ ಮನವಿ

ಕಲಬುರಗಿ, ಆ.19: ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಆಗಸ್ಟ್ 20ರಂದು ಬೆಳಿಗ್ಗೆ 10 ಗಂಟೆಗೆ ಮಾಜಿ ಪ್ರಧಾನಿ ರಾಜೀವಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆಯನ್ನು ಆಚರಿಸಲಾಗುವುದು ಎಂದು ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಕಾಳಗಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ-ಮಂಡಳಿ-ಪ್ರಾಧಿಕಾರಗಳ ಅಧ್ಯಕ್ಷರು, ಪಕ್ಷದ ಮುಖಂಡರು, ಕೆಪಿಸಿಸಿ ಹಾಗೂ ಡಿಸಿಸಿ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಲಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷರು, ಡಿಸಿಸಿ ಡೆಲಿಗೇಟ್ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿಯ ವಿವಿಧ ಮುಂಚೂಣಿ ಘಟಕಗಳು ಮತ್ತು ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದೆ.

ಅದೇ ರೀತಿ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಹಾಲಿ ಮತ್ತು ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಎಪಿಎಂಸಿಯ ಹಾಲಿ ಮತ್ತು ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಮಹಾನಗರ ಪಾಲಿಕೆಯ ಹಾಲಿ ಮತ್ತು ಮಾಜಿ ಮೇಯರ್‌ಗಳು, ಉಪಮೇಯರ್‌ಗಳು ಹಾಗೂ ಸದಸ್ಯರು, ಮಹಿಳಾ ಮತ್ತು ಯುವ ಕಾಂಗ್ರೆಸ್ ಮುಖಂಡರು, ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಗದೇವ ಗುತ್ತೇದಾರ ಕಾಳಗಿ ಕೋರಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button