ಸಾಂಸ್ಕೃತಿಕಸಾಹಿತ್ಯ

ಕಲಬುರಗಿಯಲ್ಲಿ ನಾಳೆ ವಚನಗಳ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ

ಶರಣರ ವಚನಗಳ ಆಶಯ, ಕಾಯಕ–ದಾಸೋಹ ತತ್ವಗಳನ್ನು ಚಿತ್ರಕಲೆಯಲ್ಲಿ ಅನಾವರಣ

ಕಲಬುರಗಿ, ಆ.27: ನಗರದ ಕನ್ನಡ ಭವನದಲ್ಲಿ ಆಗಸ್ಟ್ 30ರಂದು ಆಯೋಜಿಸಲಾಗಿರುವ ಕಲಬುರಗಿ ವಿಭಾಗದ ಪ್ರಥಮ ವಚನ ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಿರಿಯ ಚಿತ್ರಕಲಾವಿದ ಡಾ. ಎ.ಎಸ್. ಪಾಟೀಲ ಸಾರಥ್ಯದ ಶರಣ ಸಂಸ್ಕೃತಿ ದೃಶ್ಯಕಲಾ ಸಂಗ್ರಹಾಲಯ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಬಸವಾದಿ ಶರಣರ ವಚನಗಳನ್ನು ಆಧರಿಸಿದ ಚಿತ್ರಕಲಾ ಪ್ರದರ್ಶನವನ್ನು ಆಗಸ್ಟ್ 29ರಂದು ಬೆಳಿಗ್ಗೆ 11.30ಕ್ಕೆ ನಗರದ ಕನ್ನಡ ಭವನದ ಕಲಾ ಸೌಧದಲ್ಲಿ ಆಯೋಜಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಶರಣರ ವಚನಗಳ ಆಳವಾದ ಅರ್ಥ, ಕಾಯಕ ಹಾಗೂ ದಾಸೋಹದ ಸಿದ್ಧಾಂತಗಳನ್ನು ಹಿರಿಯ ಚಿತ್ರಕಲಾವಿದ ಡಾ. ಎ.ಎಸ್. ಪಾಟೀಲ ಅವರು ತಮ್ಮ ಕುಂಚದ ಮೂಲಕ ಚಿತ್ರವರ್ಣ ವೈಭವವಾಗಿ ಮೂಡಿಸಿದ್ದಾರೆ. ವಚನಗಳ ಆಶಯಕ್ಕೆ ತಕ್ಕಂತೆ ಈ ಚಿತ್ರಕಲಾ ಪ್ರದರ್ಶನವನ್ನು ರೂಪಿಸಲಾಗಿದೆ.

ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿ ಡಾ. ಸಿದ್ದು ಪಾಟೀಲ ಅವರು ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ರೈತಪರ ಹೋರಾಟಗಾರ ದಯಾನಂದ ಪಾಟೀಲ ಕಮಲಾನಗರ, ವಚನಪ್ರಿಯ ಜಗದೀಶ ಮರಪಳ್ಳಿ, ಮಹಿಳಾಪರ ಸಂಘಟಕಿ ಸರೋಜಿನಿ ಎಸ್. ಮಯೂರ್, ಕಲಾ ಸೌಧ ಸಂಚಾಲಕ ಡಾ. ರೆಹಮಾನ್ ಪಟೇಲ್, ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ. ಮಲ್ಲಿಕಾರ್ಜುನ ವಡ್ಡನಕೇರಿ, ವಚನ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ಎಂ. ಪಾಟೀಲ ಕಲ್ಲೂರ್ ಸೇರಿದಂತೆ ಹಲವರು ಉಪಸ್ಥಿತರಿರಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button