ಜಿಲ್ಲಾಸುದ್ದಿ

ಚಿತ್ತಾಪುರದಲ್ಲಿ ಸೆ.15ರಂದು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

ಚಿತ್ತಾಪುರ, ಸೆ.11: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2026–27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.15ರಂದು ಬೆಳಿಗ್ಗೆ 9 ಗಂಟೆಗೆ ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕ್ರೀಡಾಂಗಣ ವ್ಯವಸ್ಥಾಪಕ ಮರಿಯಪ್ಪ ಬೊಮ್ಮನಹಳ್ಳಿಕರ್ ತಿಳಿಸಿದ್ದಾರೆ.

ಕ್ರೀಡಾಕೂಟದಲ್ಲಿ ಪುರುಷರು ಹಾಗೂ ಮಹಿಳೆಯರಿಗಾಗಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್‌ಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್, ಯೋಗ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗುವುದು.

ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಕಡ್ಡಾಯವಾಗಿ ವೆಬ್‌ಸೈಟ್ ಮೂಲಕ ಆನ್‌ಲೈನ್ ನೋಂದಣಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಕ್ರೀಡಾಪಟುಗಳಿಗೆ ನಿಯಮಗಳು

ಕ್ರೀಡಾಪಟುಗಳು ಸ್ವಯಂ ಇಚ್ಛೆಯಿಂದ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಹಾಗೂ ಕರ್ನಾಟಕದ ನಿವಾಸಿಗಳಾಗಿರಬೇಕು. ರಕ್ಷಣಾ ಪಡೆ ಮತ್ತು ಅರೆಸೇನಾ ಪಡೆಗಳಿಗೆ ಸೇರಿದ ಕ್ರೀಡಾಪಟುಗಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ.

ಒಬ್ಬ ಕ್ರೀಡಾಪಟು ಅಥವಾ ತಂಡವು ಒಂದು ಬಾರಿ ತಾಲ್ಲೂಕು ಅಥವಾ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿದ ಬಳಿಕ ಮತ್ತೊಂದು ತಾಲ್ಲೂಕು ಅಥವಾ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ.

ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳನ್ನು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಮಾಡಲಾಗುವುದು. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಆಯೋಜಕರು ತಿಳಿಸಿದ್ದಾರೆ.

ಆನ್‌ಲೈನ್ ನೋಂದಣಿ ಕಡ್ಡಾಯ

ಆನ್‌ಲೈನ್ ನೋಂದಣಿ ಮಾಡದ ಕ್ರೀಡಾಪಟುಗಳ

Related Articles

Leave a Reply

Your email address will not be published. Required fields are marked *

Back to top button