ಜಿಲ್ಲಾಸುದ್ದಿ
ಜೇವರ್ಗಿಯಲ್ಲಿ ಸೆ.12ರಂದು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

ಜೇವರ್ಗಿ, ಸೆ.11: ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.12ರಂದು ಶನಿವಾರ ಬೆಳಿಗ್ಗೆ 9 ಗಂಟೆಗೆ ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಕ್ರೀಡಾಕೂಟದಲ್ಲಿ ಪುರುಷರು ಹಾಗೂ ಮಹಿಳೆಯರಿಗಾಗಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್ಬಾಲ್, ಕೋಕೋ, ಕಬಡ್ಡಿ, ಪ್ರೋ ಕಬಡ್ಡಿ ಹಾಗೂ ಯೋಗ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗುವುದು.
ಆಸಕ್ತ ಕ್ರೀಡಾಪಟುಗಳು ಇಲಾಖೆಯ ವೆಬ್ಸೈಟ್ ಮೂಲಕ ವೈಯಕ್ತಿಕ ಹಾಗೂ ಗುಂಪು ಕ್ರೀಡೆಗಳಿಗೆ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ನೋಂದಾಯಿತ ಕ್ರೀಡಾಪಟುಗಳು ಅಗತ್ಯ ದಾಖಲೆಗಳನ್ನು ಸಲ್ಲಿಸಿ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು.
ಕ್ರೀಡಾಕೂಟದಲ್ಲಿ ಭಾಗವಹಿಸುವ ಸ್ಪರ್ಧಿಗಳಿಗೆ ಯಾವುದೇ ರೀತಿಯ ಭತ್ಯೆ ನೀಡಲಾಗುವುದಿಲ್ಲ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



