ಜಿಲ್ಲಾಸುದ್ದಿ

ಕುಟುಂಬದ ವಿರೋಧಕ್ಕೆ ಪ್ರೇಮಜೋಡಿ ಬಲಿ: ಒಂದೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ

ಚಿತ್ತಾಪುರ, ಸೆ.12- ಕುಟುಂಬಸ್ಥರ ವಿರೋಧದ ಹಿನ್ನೆಲೆಯಲ್ಲಿ ಪರಸ್ಪರ ಪ್ರೀತಿಸುತ್ತಿದ್ದ ಯುವಕ-ಯುವತಿ ಒಂದೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಸಂಕನೂರು ಗ್ರಾಮದ ಹೊರವಲಯದ ಗುಡ್ಡ ಪ್ರದೇಶದಲ್ಲಿ ನಡೆದಿದೆ.

ಮೃತರನ್ನು ಪಟ್ಟಣದ ಬಸವನಗರ ನಿವಾಸಿ ಶ್ರೀಮತಿ ಶರಣಮ್ಮ ಭೀಮನಳ್ಳಿ (32) ಹಾಗೂ ಯಾದಗಿರಿ ಜಿಲ್ಲೆಯ ಬಾಚವಾರ ಗ್ರಾಮದ ನಿವಾಸಿ ಬಸವರಾಜ ಮಟೋರ್ (21) ಎಂದು ಗುರುತಿಸಲಾಗಿದೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಅವರ ಪ್ರೀತಿಗೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರು ಎಂದು ತಿಳಿದುಬಂದಿದೆ.

ಕುಟುಂಬದ ವಿರೋಧದಿಂದ ಮನನೊಂದು ಇಬ್ಬರೂ ಮೂರು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಗುಡ್ಡ ಪ್ರದೇಶದಲ್ಲಿ ಇಬ್ಬರ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button