ಅಪರಾಧ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಕಲಬುರಗಿ, ಸೆ.12: ನ್ಯಾಯಾಲಯದಿಂದ ಜಾಮೀನು ಪಡೆದು ಕಳೆದ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಚಿತ್ತಾಪುರ ತಾಲ್ಲೂಕಿನ ಕಡಬೂರ ಗ್ರಾಮದ ಮುಕುಂದ ಶಾ ತಂದೆ ಮಹೆಬೂಬ್ ಬಾವಾಗೋಳನಿ ಎಂಬ ಆರೋಪಿಯನ್ನು ವಾಡಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದರೋಡೆ ಹಾಗೂ ಕಳ್ಳತನಕ್ಕೆ ಸಂಬಂಧಿಸಿದ ಒಟ್ಟು ನಾಲ್ಕು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಆರೋಪಿ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಎಸ್ಪಿ ಶಂಕರಗೌಡ ಪಾಟೀಲ ಹಾಗೂ ಸಿಪಿಐ ಎಸ್.ಸಿ. ಪಾಟೀಲ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಪಿಎಸ್ಐಗಳಾದ ತಿರುಮಲೇಶ, ಮಂಜುನಾಥರೆಡ್ಡಿ ಹಾಗೂ ಸಿಬ್ಬಂದಿಯಾದ ವಿನೋದಕುಮಾರ್, ರಸೂಲ್‌ಖಾನ್, ಅಜರುದ್ದೀನ್, ಅಯ್ಯಣ್ಣ ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button