ಜಿಲ್ಲಾ ಕಾಂಗ್ರೆಸ್ ಬಲವರ್ಧನೆಗೆ ಬ್ಲಾಕ್ ಅಧ್ಯಕ್ಷರ ಸಭೆ

ಕಲಬುರಗಿ, ಸೆ.21: ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಡಾ. ಕಿರಣಕುಮಾರ ದೇಶಮುಖ್ ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲೆಯ ಎಲ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೊಂದಿಗೆ ಮಹತ್ವದ ಸಭೆ ನಡೆಸಿದರು.
ಸಭೆಯಲ್ಲಿ ಜಿಲ್ಲೆಯಾದ್ಯಂತ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಬ್ಲಾಕ್ ಮಟ್ಟದಲ್ಲಿ ಪಕ್ಷದ ಚಟುವಟಿಕೆಗಳನ್ನು ಚುರುಕುಗೊಳಿಸುವುದು, ಕಾರ್ಯಕರ್ತರನ್ನು ಒಗ್ಗೂಡಿಸುವುದು ಹಾಗೂ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಸದೃಢಗೊಳಿಸುವ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.
ಜಿಲ್ಲೆಯ ಪ್ರತಿಯೊಂದು ಬ್ಲಾಕ್‌ನಲ್ಲಿಯೂ ಪಕ್ಷದ ಸಂಘಟನೆಯನ್ನು ಬಲಪಡಿಸಿ, ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಡಾ. ಕಿರಣಕುಮಾರ ದೇಶಮುಖ್ ಮಾರ್ಗದರ್ಶನ ನೀಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಮೊದಲ ಬಾರಿಗೆ ನಡೆದ ಸಭೆಯಲ್ಲಿ ಎಲ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಭಾಗವಹಿಸಿ, ಪಕ್ಷದ ಸಂಘಟನೆ ಬಲವರ್ಧನೆಗೆ ಸಂಬಂಧಿಸಿದಂತೆ ತಮ್ಮ ಸಲಹೆ ಮತ್ತು ಅಭಿಪ್ರಾಯಗಳನ್ನು ಹಂಚಿಕೊಂಡರು.



