ಕಲ್ಯಾಣ ಕರ್ನಾಟಕ

ಅಕ್ಟೋಬರ್ 23ಕ್ಕೆ ಮತದಾನ,ಅಕ್ಟೋಬರ್ 27ಕ್ಕೆ ಮತ ಎಣಿಕೆ-ಜಹೀರಾ ನಸ್ಸೀಂ

ಕಲಬುರಗಿ,ಸೆ.22- ಭಾರತ ಚುನಾವಣಾ ಆಯೋಗುವು ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಘೋಷಣೆ ಮಾಡಿದ್ದು, ಅದರಂತೆ 2026ರ ಅಕ್ಟೋಬರ್ 23ಕ್ಕೆ ಮತದಾನ ಮತ್ತು ಅಕ್ಟೋಬರ್ 27ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಕ್ಷೇತ್ರದ ಚುನಾವನಾಧಿಕಾರಿಯಾಗಿರುವ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸ್ಸೀಂ ತಿಳಿಸಿದ್ದಾರೆ.

ಕ್ಷೇತ್ರದ ಚುನಾವಣೆಗೆ ಇದೇ ಸೆಪ್ಟೆಂಬರ್ 29 ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಸೆ.29 ರಿಂದ ಅ.6ರ ವರೆಗೆ (ಸರ್ಕಾರಿ ರಜಾ ದಿನ ಹೊರತುಪಡಿಸಿ) ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ. ಅಕ್ಟೋಬರ್ 7 ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನವಾಗಿರುತ್ತದೆ. ಇನ್ನು ಮತದಾನ ಅಕ್ಟೋಬರ್ 23 (ಶುಕ್ರವಾರ) ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆ ವರೆಗೆ ನಡೆಯಲಿದ್ದು, ಮತ ಎಣಿಕೆ ಕಾರ್ಯ ಅಕ್ಟೋಬರ್ 27 (ಮಂಗಳವಾರ) ರಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ ಎಂದು ಚುನಾವಣಾಧಿಕಾರಿಗಳು ವೇಳಾಪಟ್ಟಿ ಕುರಿತು ಮಾಹಿತಿ ನೀಡಿದ್ದಾರೆ.

ನಾಮಪತ್ರಗಳ ನಮೂನೆಗಳನ್ನು ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಚುನಾವಣೆ ಶಾಖೆಯಿಂದ ಪಡೆದು ಭರ್ತಿ ಮಾಡಿದ ನಾಮಪತ್ರಗಳನ್ನು ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ “ಕಾನ್‌ಫರೆನ್ಸ್ ಹಾಲ್”, 2ನೇ ಮಹಡಿ ಜಿಲ್ಲಾಡಳಿತ ಭವನ, ಕಲಬುರಗಿ ಇಲ್ಲಿ ಸಲ್ಲಿಸಬಹುದಾಗಿದೆ. ಈಶಾನ್ಯ ಶಿಕ್ಷಕರ ಮತಕ್ಷೇತ್ರದ ವ್ಯಾಪ್ತಿಗೆ ಕಲಬುರಗಿ ವಿಭಾಗದ ಕಲಬುರಗಿ, ಬೀದರ, ರಾಯಚೂರು, ಬಳ್ಳಾರಿ, ಕೊಪ್ಪಳ, ಯಾದಗಿರ ಹಾಗೂ ವಿಜಯನಗರ (ಹೊಸಪೇಟೆ) ಜಿಲ್ಲೆಗಳು ಒಳಪಡಲಿದ್ದು, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರೇ ಚುನಾವಣಾಧಿಕಾರಿ ಮತ್ತು ಮತದಾರರ ನೋಂದಾಣಾಧಿಕಾರಿಗಳಾಗಿರುತ್ತಾರೆ. ವಿಭಾಗದ ಕಲಬುರಗಿ, ಬೀದರ, ರಾಯಚೂರ, ಬಳ್ಳಾರಿ, ಕೊಪ್ಪಳ, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಅಲ್ಲದೇ ವಿಭಾಗದ ಜಿಲ್ಲಾಧಿಕಾರಿಗಳು, ಕಲಬುರಗಿ, ಬಳ್ಳಾರಿ, ಬೀದರ ಮತ್ತು ರಾಯಚೂರು ಮಹಾನಗರ ಪಾಲಿಕೆ ಆಯುಕ್ತರು, ಎಲ್ಲಾ ಸಹಾಯಕ ಆಯುಕ್ತರು ಹಾಗೂ ತಹಶೀಲ್ದಾರರು ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.ಎಂ.ಸಿ.ಸಿ.

ತಕ್ಷಣದಿಂದಲೆ ಜಾರಿ:ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ದ್ವೆöÊವಾರ್ಷಿಕ ಚುನಾವಣೆ ಘೋಷಣೆ ಮಾಡಿದ್ದರಿಂದ ತಕ್ಷಣದಿಂದಲೆ ಜಾರಿಗೆ ಬರುವಂತೆ ಕ್ಷೇತ್ರದಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button