ಹೊನಗುಂಟಾದಲ್ಲಿ ಸೆ.28ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ

ಕಲಬುರಗಿ, ಸೆ.24: ಜಿಲ್ಲೆಯ ಹೊನಗುಂಟಾದಲ್ಲಿ ಸೆ.28ರಂದು ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವದ ಅಂಗವಾಗಿ ಭವ್ಯ ಮೆರವಣಿಗೆ, ಜಾತ್ರಾ ಮಹೋತ್ಸವ ಹಾಗೂ ಬಹಿರಂಗ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಆಯೋಜಕ ದೊಡ್ಡಪ್ಪ ಹೊಸಮನಿ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ವಿವಿಧ ಮಠಾಧೀಶರು ಹಾಗೂ ಗಣ್ಯರು ಸಾನ್ನಿಧ್ಯ ವಹಿಸಲಿದ್ದಾರೆ. ತಿಂತಣಿ ಬ್ರೀಡ್ಸ್ನ ಶ್ರೀ ಕಾಗಿನೆಲೆ ಕನಕಗುರು ಪೀಠದ ಲಿಂಗಬೀರಣ್ಣ ದೇವರು, ಸುಗೂರು ಶ್ರೀ ಬೋಜಲಿಂಗೇಶ್ವರ ಸಂಸ್ಥಾನ ಮಠದ ಹಿರಗಪ್ಪ ತಾತಾ, ಹೊನಗುಂಟಾದ ಪದ್ಮಣ್ಣಪ್ಪ ಮುತ್ಯಾ, ರಾವೂರಿನ ಸಿದ್ಧಲಿಂಗ ಶಿವಾಚಾರ್ಯರು, ಬಸವಪಟ್ಟಣದ ಮರೆಪ್ಪ ಮುತ್ಯಾ ಹಾಗೂ ತೊನಸನಹಳ್ಳಿ ಎಸ್.ಎನ್. ಮಲ್ಲಣ್ಣಪ್ಪ ಮುತ್ಯಾ ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.
ಜಯಂತ್ಯೋತ್ಸವದ ಅಂಗವಾಗಿ ನಡೆಯುವ ಮೆರವಣಿಗೆಗೆ ರಾಜ್ಯದ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ ನೀಡಲಿದ್ದಾರೆ. ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಹಾಗೂ ಕೊಪ್ಪಳದ ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.
ಕೆ.ಆರ್.ಪುರಂ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಅವರು ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ.
ಮಾಜಿ ಸಂಸದ ಉಮೇಶ್ ಜಾಧವ್, ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಜಿ.ಎಂ. ಕೊರಬು ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಿದ್ದಾರೆ.
ಲಿಂ. ಸಿದ್ಧರಾಮಾನಂದಪುರಿ ಸ್ವಾಮೀಜಿ, ಡಾ. ಭೀಮಣ್ಣ ಮೇಟಿ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಶ್ರೀಮತಿ ಪಾರ್ವತಿಬಾಯಿ ಶಂಕರ ಚವಾಣ್, ಜಿಲ್ಲಾ ಪಂಚಾಯಿತಿ ಮಾಜಿ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ್ ಸೇರಿದಂತೆ ಹಲವು ಗಣ್ಯರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ದಿಲೀಪ್ ಆರ್. ಪಾಟೀಲ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜಗೋಪಾಲರೆಡ್ಡಿ ಅವರು ಜ್ಯೋತಿ ಬೆಳಗಿಸಲಿದ್ದಾರೆ. ಬಿಜೆಪಿ ಮುಖಂಡ ಬೀರಣ್ಣ ಕಲ್ಲೂರ್, ಕಾಂಗ್ರೆಸ್ ಮುಖಂಡ ಭೀಮಾಶಂಕರ ಖೇಣಿ ಹಾಗೂ ಉದ್ಯಮಿ ಯಲ್ಲಾಲಿಂಗ ಮುಗಟಾ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಲ್ಲು ಸಿರನೂರು ವಹಿಸಲಿದ್ದು, ಗೌರವಾಧ್ಯಕ್ಷರಾಗಿ ಡಿ.ಸಿ. ಹೊಸಮನಿ ಹಾಗೂ ಮಲ್ಲಿಕಾರ್ಜುನ ಪೂಜಾರಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಬೀರಣ್ಣ ಕಲ್ಲೂರ್, ಯಲ್ಲಾಲಿಂಗ ಕರಗಾರ, ಮಲ್ಲು ಸಿರನೂರು ಸೇರಿದಂತೆ ಆಯೋಜಕರು ಉಪಸ್ಥಿತರಿದ್ದರು.



