ಗುರುನಮನ ಕಾರ್ಯಕ್ರಮಕ್ಕೆ ಸಿದ್ಧತೆ: ಸೆ.27ರಂದು ಯಾದವಾಡದಲ್ಲಿ ಮತ್ತೊಂದು ಸಭೆ
ಹಳೆಯ ವಿದ್ಯಾರ್ಥಿಗಳ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆ ಕುರಿತು ಚರ್ಚೆ

ಬೆಳಗಾವಿ, ಸೆ.25: ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಯಾದವಾಡದ ಶ್ರೀ ಗುರುನೀಲಕಂಠ ಸ್ವಾಮಿ ಪ್ರೌಢಶಾಲೆಯ 1983–84ನೇ ಸಾಲಿನ ಹಳೆಯ ವಿದ್ಯಾರ್ಥಿಗಳ ವತಿಯಿಂದ ಅ.31ರಂದು ಹಮ್ಮಿಕೊಳ್ಳಲಾಗಿರುವ ಗುರುಪೂರ್ಣಿಮೆ ಕಾರ್ಯಕ್ರಮದ ಸಿದ್ಧತೆಗಳು ಮುಂದುವರಿದಿವೆ. ಈ ಹಿನ್ನೆಲೆಯಲ್ಲಿ ಸೆ.27ರಂದು ಬೆಳಿಗ್ಗೆ 10 ಗಂಟೆಗೆ ಯಾದವಾಡದ ಜಿಎನ್‌ಎಸ್ ಪ್ರೌಢಶಾಲೆಯಲ್ಲಿ ಮತ್ತೊಂದು ಸಭೆ ಕರೆಯಲಾಗಿದೆ ಎಂದು ಹಳೆಯ ವಿದ್ಯಾರ್ಥಿ ಹಾಗೂ ಶಿಕ್ಷಕ ರಾಜೇಂದ್ರ ಸಿ. ಕಲ್ಯಾಣಿ ತಿಳಿಸಿದ್ದಾರೆ.
ಈಗಾಗಲೇ ನಡೆದ ಸಭೆಯಲ್ಲಿ ಕಾರ್ಯಕ್ರಮದ ವಿವಿಧ ವಿಷಯಗಳ ಕುರಿತು ಚರ್ಚಿಸಲಾಗಿದ್ದು, ಮುಂದಿನ ಸಭೆಯಲ್ಲಿ ಕಾರ್ಯಕ್ರಮದ ಅಂತಿಮ ರೂಪುರೇಷೆ ಕುರಿತು ನಿರ್ಧಾರ ಕೈಗೊಳ್ಳಲು ಉದ್ದೇಶಿಸಲಾಗಿದೆ.
ಹಳೆಯ ವಿದ್ಯಾರ್ಥಿಗಳಾದ ರಾಜೇಂದ್ರ ಸಿ. ಕಲ್ಯಾಣಿ, ವೆಂಕಟೇಶ ಲಕ್ಷ್ಮಣಿ, ಗುರುಶಾಂತ ಕರತಮ್ಮದ, ತಾರಾಬಾಯಿ ಉದಪುಡಿ, ಗೋದಾವರಿ ದೇಶಪಾಂಡೆ, ಮಹಾದೇವಿ ಪೂಜಾರಿ, ವಿಜಯಲಕ್ಷ್ಮೀ ಶೇರಿಗಾರ, ಗಿರಿಜಾ ತಾಂವಶಿ, ಪ್ರೇಮಾ ಕುಲಕರ್ಣಿ, ಮಲ್ಲಿಕಾರ್ಜುನ ಹುಲಗಬಾಳಿ, ಬಸವರಾಜ ಚಿನಿವಾರ, ಬಸವರಾಜ ಮಾಳೇದ, ಮಹಾದೇವ ಹಾವಣ್ಣವರ, ಸುರೇಶ ಪೂಜಾರಿ ಸೇರಿದಂತೆ ಹಲವರು ಸಭೆಯಲ್ಲಿ ಭಾಗವಹಿಸಿ ಸಲಹೆ, ಸೂಚನೆಗಳನ್ನು ನೀಡಿದ್ದಾರೆ.
ಮೊದಲ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಹಾಗೂ ರಾಜ್ಯಸಭಾ ಸದಸ್ಯೆ ಡಾ. ಸುಧಾಮೂರ್ತಿ ಅವರನ್ನು ಕಾರ್ಯಕ್ರಮಕ್ಕೆ ದಿಕ್ಸೂಚಿ ಭಾಷಣಕ್ಕೆ ಆಹ್ವಾನಿಸುವ ಕುರಿತು ಸಂಪರ್ಕಿಸಲಾಗಿದೆ. ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಅವರು ಆಹ್ವಾನವನ್ನು ಸ್ವೀಕರಿಸಲು ಸಾಧ್ಯವಾಗದಿದ್ದರೂ ಶುಭಾಶಯಗಳನ್ನು ತಿಳಿಸಿದ್ದಾರೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಗಿದೆ.
ಇದೀಗ ಮೈಸೂರು ದಸರಾ ಉದ್ಘಾಟನೆಗೆ ಸಿದ್ಧರಾಗಿರುವ ಗವಿಸಿದ್ದೇಶ್ವರ ಮಠದ ಸ್ವಾಮೀಜಿಯವರನ್ನು ಸಂಪರ್ಕಿಸುವ ಪ್ರಯತ್ನವನ್ನು ಹಳೆಯ ವಿದ್ಯಾರ್ಥಿಗಳು ಮುಂದುವರಿಸಿದ್ದಾರೆ. ಹೀಗಾಗಿ ಸೆ.27ರಂದು ನಡೆಯುವ ಸಭೆಯಲ್ಲಿ ದಿಕ್ಸೂಚಿ ಭಾಷಣಕಾರರ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಕಾರ್ಯಕ್ರಮಕ್ಕೆ ಬಹುತೇಕ ಹಳೆಯ ವಿದ್ಯಾರ್ಥಿನಿಯರು ಆಗಮಿಸಲು ಒಪ್ಪಿಗೆ ಸೂಚಿಸಿದ್ದಾರೆ. ಆದರೆ ತಾಯಿಯ ಯೋಗಕ್ಷೇಮದ ಹಿನ್ನೆಲೆಯಲ್ಲಿ ಶ್ರೀಮತಿ ಸರಳಾ ಕುಲಕರ್ಣಿ ಅವರು ಆಗಮಿಸುವ ಕುರಿತು ಇನ್ನೂ ಸ್ಪಷ್ಟತೆ ಇಲ್ಲ ಎಂದು ಗೋದಾವರಿ ದೇಶಪಾಂಡೆ ತಿಳಿಸಿದ್ದಾರೆ.
ತಾರಾದೇವಿ ಉದಪುಡಿ, ಮಹಾದೇವಿ ಪೂಜಾರಿ, ಸುರೇಶ ಕಲಾಲ, ಗುರು ತುಪ್ಪದ್, ಈರಮ್ಮ ಡುಮ್ಮನವರ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸುವುದರ ಜೊತೆಗೆ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸುವ ಭರವಸೆ ನೀಡಿದ್ದಾರೆ.



