ಜಿಲ್ಲಾಸುದ್ದಿ
ತಡವಾಗಿ ಕಚೇರಿಗೆ ಬರುವ ಅಧಿಕಾರಿಗಳು, ಸಿಬ್ಬಂದಿಗೆ ಗೇಟ್ ಬಂದ್!

ಬೀದರ್, ಸೆ.26: ಕಚೇರಿಗೆ ನಿಗದಿತ ಸಮಯಕ್ಕೆ ಆಗಮಿಸದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೇಟ್ ಬಂದ್ ಮಾಡಿಸಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ತರಗತಿ ತೆಗೆದುಕೊಂಡ ಘಟನೆ ನಡೆದಿದೆ.
ಜಿಪಂ ಸಿಇಒ ಮದನ ವಿಠ್ಠಲರಾವ್ ಅವರು ಕಚೇರಿಗೆ ದಿಢೀರ್ ಭೇಟಿ ನೀಡಿ, ಅಧಿಕಾರಿಗಳು ಹಾಗೂ ಸಿಬ್ಬಂದಿಯ ಹಾಜರಾತಿ ಪರಿಶೀಲಿಸಿದರು. ಈ ವೇಳೆ ನಿಗದಿತ ಸಮಯಕ್ಕೆ ಕಚೇರಿಗೆ ಆಗಮಿಸದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಗೇಟ್ ಬಂದ್ ಮಾಡಿಸಿ, ಸಮಯ ಪಾಲನೆಯ ಕುರಿತು ತರಾಟೆಗೆ ತೆಗೆದುಕೊಂಡರು.
ಕಚೇರಿಗೆ ಸಮಯಕ್ಕೆ ಸರಿಯಾಗಿ ಆಗಮಿಸಿ ಸಾರ್ವಜನಿಕರ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸಿಇಒ ಸೂಚಿಸಿದರು. ಸರ್ಕಾರಿ ಕಚೇರಿಗಳಲ್ಲಿ ಸಮಯ ಪಾಲನೆ ಹಾಗೂ ಕರ್ತವ್ಯನಿಷ್ಠೆ ಕಾಪಾಡಿಕೊಳ್ಳುವಂತೆ ಅವರು ಎಚ್ಚರಿಕೆ ನೀಡಿದರು.



