ಜಿಲ್ಲಾಸುದ್ದಿ

ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಕಲಬುರಗಿಗೆ ತೃತೀಯ ಸ್ಥಾನ; ಆಳಂದದ ವಿಜಯಲಕ್ಷ್ಮಿಗೆ ₹11 ಸಾವಿರ ಬಹುಮಾನ

ಕಲಬುರಗಿ, ಸೆ. 30: ಮಹಾತ್ಮ ಗಾಂಧೀಜಿ ಅವರ 157ನೇ ಜನ್ಮದಿನದ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಮಾರಿ ವಿಜಯಲಕ್ಷ್ಮಿ ಲಕ್ಷ್ಮೀಕಾಂತ ಪೋದಾರ್ ತೃತೀಯ ಸ್ಥಾನ ಗಳಿಸಿದ್ದಾರೆ.

ಕಲಬುರಗಿ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದ ವಿಜಯಲಕ್ಷ್ಮಿ ಅವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದರು. ಇದೀಗ ರಾಜ್ಯಮಟ್ಟದಲ್ಲಿಯೂ ತೃತೀಯ ಸ್ಥಾನ ಗಳಿಸುವ ಮೂಲಕ ಕಾಲೇಜು ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ರಾಜ್ಯದ 31 ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ರಾಜ್ಯಮಟ್ಟಕ್ಕೆ ಕಳುಹಿಸಲಾಗಿತ್ತು.

ಇವರ ಪೈಕಿ ಕಲಬುರಗಿಯ ವಿಜಯಲಕ್ಷ್ಮಿ ಅವರು ತೃತೀಯ ಬಹುಮಾನಕ್ಕೆ ಪಾತ್ರರಾಗಿದ್ದಾರೆ.ವಿಜಯಲಕ್ಷ್ಮಿ ಅವರಿಗೆ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ₹11,000 ನಗದು ಬಹುಮಾನ ಹಾಗೂ ಪ್ರಮಾಣಪತ್ರ ನೀಡಿ ಗೌರವಿಸಲಾಗುವುದು ಎಂದು ಕಲಬುರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಜಡಿಯಪ್ಪ ಗೆದ್ಲಗಟ್ಟಿ ತಿಳಿಸಿದ್ದಾರೆ.

sswnews

https://sswnewskannada.com

Related Articles

Leave a Reply

Your email address will not be published. Required fields are marked *

Back to top button