ಜಿಲ್ಲಾಸುದ್ದಿ

ಶಿಕ್ಷಕರ ಚುನಾವಣೆ: ಸೇಡಂನಲ್ಲಿ ಮಟೂರು ಪರ ಕಾಂಗ್ರೆಸ್ ಭರ್ಜರಿ ಪ್ರಚಾರ

ಸೇಡಂ, ಅ.3- ರಾಜ್ಯ ಕೃಷಿ ಪ್ರತಿನಿಧಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಬಸವರಾಜ ಆರ್. ಪಾಟೀಲ ಊಡಗಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಪಟ್ಟಣದ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟೂರು ಪರವಾಗಿ ಭರ್ಜರಿ ಮತಯಾಚನೆ ನಡೆಸಿದರು.

ಪಟ್ಟಣದ ವಿಶ್ವಜ್ಯೋತಿ ಶಾಲೆ, ನೃಪತುಂಗ ಪದವಿ ಕಾಲೇಜು, ಡಿ.ಡಿ.ಯು. ಪಿಯು ವಿಜ್ಞಾನ ಕಾಲೇಜು ಹಾಗೂ ಜ್ಞಾನಜ್ಯೋತಿ ಐಟಿಐ ಕಾಲೇಜುಗಳಿಗೆ ಭೇಟಿ ನೀಡಿದ ಮುಖಂಡರು, ಶಿಕ್ಷಕರನ್ನು ಭೇಟಿಯಾಗಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟೂರು ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಿಕ್ಷಕರ ವಿವಿಧ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದ ಮುಖಂಡರು, ಶಿಕ್ಷಕರ ಹಿತಾಸಕ್ತಿಗಾಗಿ ಕಾಂಗ್ರೆಸ್ ಸರ್ಕಾರ ಹಾಗೂ ಶರಣಪ್ಪ ಮಟೂರು ಅವರು ಸದಾ ಸಕ್ರಿಯವಾಗಿ ಸ್ಪಂದಿಸಲಿದ್ದಾರೆ ಎಂದು ತಿಳಿಸಿದರು.

ಶಿಕ್ಷಕರ ಹಳೆಯ ಪಿಂಚಣಿ ಯೋಜನೆ, ವೇತನ ಪರಿಷ್ಕರಣೆ, ವಿವಿಧ ಭತ್ಯೆಗಳು ಸೇರಿದಂತೆ ಶಿಕ್ಷಕರಿಗೆ ಸಂಬಂಧಿಸಿದ ನ್ಯಾಯಸಮ್ಮತ ಬೇಡಿಕೆಗಳಿಗೆ ಸ್ಪಂದಿಸಿ, ಅವುಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವ ಭರವಸೆ ನೀಡಲಾಯಿತು.

ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಹಾಗೂ ಶಿಕ್ಷಕರ ಹಿತ ಕಾಪಾಡುವ ನಿಟ್ಟಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟೂರು ಅವರಿಗೆ ತಮ್ಮ ಅಮೂಲ್ಯ ಮತ ನೀಡಿ ಬೆಂಬಲಿಸುವಂತೆ ಶಿಕ್ಷಕರಲ್ಲಿ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣ ರೆಡ್ಡಿಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಶ್ವನಾಥ ಪಾಟೀಲ ಬೊಮ್ಮನಹಳ್ಳಿ, ತಾಲೂಕು ಕೃಷಿ ಪ್ರತಿನಿಧಿಗಳ ಅಧ್ಯಕ್ಷ ಬಸವರಾಜ ರೇವಗೊಂಡ ತೊಟ್ನಳ್ಳಿ, ಯುವ ಕಾಂಗ್ರೆಸ್ ಉಪಾಧ್ಯಕ್ಷ ವಿಲಾಸ ಗೌತಮ್ ನಿಡಗುಂದಾ, ಹಿಂದುಳಿದ ವರ್ಗಗಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಪೂಜಾರಿ, ವಿಜಯಕುಮಾರ ಗುತೇದಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

sswnews

https://sswnewskannada.com

Related Articles

Leave a Reply

Your email address will not be published. Required fields are marked *

Back to top button