ಜಿಲ್ಲಾಸುದ್ದಿ

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ನಾಳೆ ಶಶೀಲ್ ಜಿ. ನವೋಶಿ ನಾಮಪತ್ರ ಸಲ್ಲಿಕೆ

ಕಲಬುರಗಿ, ಅ.3- ಮುಂಬರುವ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನವೋಶಿ ಅವರ ಪರವಾಗಿ ನಾಮಪತ್ರ ಸಲ್ಲಿಸುವ ಕಾರ್ಯಕ್ರಮ ಅ.5ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾಗವಹಿಸಿ ಪಕ್ಷದ ಅಭ್ಯರ್ಥಿಗೆ ಶುಭ ಹಾರೈಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯ ಎಲ್ಲ ಶಿಕ್ಷಕರು, ಅಧ್ಯಾಪಕರು, ಶಿಕ್ಷಣ ಕ್ಷೇತ್ರದ ಪ್ರಮುಖರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಶಿಕ್ಷಕರ ವರ್ಗಾವಣೆ, ಬಡ್ತಿ, ನೇಮಕಾತಿ, ಸೇವಾ ಭದ್ರತೆ, ವೇತನ ಹಾಗೂ ಪಿಂಚಣಿ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಧ್ವನಿ ಎತ್ತುವುದರ ಜೊತೆಗೆ, ಪದವಿ ಪೂರ್ವ ಶಿಕ್ಷಣ, ವಿಶ್ವವಿದ್ಯಾಲಯಗಳು ಹಾಗೂ ವೃತ್ತಿಪರ ಶಿಕ್ಷಣ ಕ್ಷೇತ್ರದ ಸಮಸ್ಯೆಗಳಿಗೂ ಸ್ಪಂದಿಸುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರದ ಹಿತಾಸಕ್ತಿಗೆ ಧಕ್ಕೆ ತರುವ ಸರ್ಕಾರದ ನೀತಿಗಳು ಮತ್ತು ನಿರ್ಧಾರಗಳ ವಿರುದ್ಧ ಸದನದ ಒಳಗೂ ಹೊರಗೂ ಪ್ರಜಾಸತ್ತಾತ್ಮಕವಾಗಿ ಹೋರಾಟ ನಡೆಸಲು ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನವೋಶಿ ಬದ್ಧರಾಗಿದ್ದಾರೆ ಎಂದು ರವಿಕುಮಾರ್ ತಿಳಿಸಿದ್ದಾರೆ.

ಶಿಕ್ಷಣ ಕ್ಷೇತ್ರದ ಸಮಸ್ಯೆಗಳಿಗೆ ಪರಿಣಾಮಕಾರಿಯಾಗಿ ಸ್ಪಂದಿಸುವ ಶಶೀಲ್ ಜಿ. ನವೋಶಿ ಅವರಿಗೆ ಶಿಕ್ಷಕರು ತಮ್ಮ ಅಮೂಲ್ಯ ಬೆಂಬಲ ನೀಡಬೇಕು. ಮುಂಬರುವ ಚುನಾವಣೆಯಲ್ಲಿ ಅವರ ಪರವಾಗಿ ಮತ ಚಲಾಯಿಸಿ ಆಶೀರ್ವದಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

sswnews

https://sswnewskannada.com

Related Articles

Leave a Reply

Your email address will not be published. Required fields are marked *

Back to top button