ಜಿಲ್ಲಾಸುದ್ದಿ
ರಾಜ್ಯಮಟ್ಟಕ್ಕೆ ಫರತಾಬಾದ್ ವಿದ್ಯಾರ್ಥಿನಿ ನಾಗರತ್ನ ಆಯ್ಕೆ

ಕಲಬುರಗಿ, ಅ.5– ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಹಾಗೂ ಉಪನಿರ್ದೇಶಕರ ಕಚೇರಿ ವತಿಯಿಂದ ಆಯೋಜಿಸಿದ್ದ 14–17 ವರ್ಷ ವಯೋಮಿತಿಯ ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಫರತಾಬಾದ್ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ನಾಗರತ್ನ ಅತ್ಯುತ್ತಮ ಸಾಧನೆ ಮಾಡಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಕು. ನಾಗರತ್ನ ಅವರು 3 ಕಿ.ಮೀ. ನಡಿಗೆ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅವರ ಈ ಸಾಧನೆಗೆ ಶಾಲೆಯ ಮುಖ್ಯಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ಶಾಲಾ ಸಿಬ್ಬಂದಿ ವರ್ಗ ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ನಾಗರತ್ನ ಉತ್ತಮ ಪ್ರದರ್ಶನ ನೀಡಿ ಶಾಲೆ ಹಾಗೂ ಜಿಲ್ಲೆಗೆ ಕೀರ್ತಿ ತರಲಿ ಎಂದು ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿ ಶುಭ ಹಾರೈಸಿದ್ದಾರೆ.



