ಜಿಲ್ಲಾಸುದ್ದಿ

ಸ್ಟಿಕ್‌ನಿಂದ ಹೊಡೆದು ವ್ಯಕ್ತಿಯ ಹತ್ಯೆ

ಕಲಬುರಗಿ, ಅ.5– ಸ್ಟಿಕ್‌ನಿಂದ ಹೊಡೆದು ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿರುವ ಘಟನೆ ನಗರದ ಹೊರವಲಯದ ಹೊಟೇಲೊಂದರ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಪತ್ತೆಯಾಗಿದೆ.

ಮೃತರನ್ನು ಬ್ರಹ್ಮಪುರ ಕನಕನಗರ ನಿವಾಸಿ ಸಿದ್ದಲಿಂಗ ಸಾವಳಗಿ (35) ಎಂದು ಗುರುತಿಸಲಾಗಿದೆ. ಕಳೆದ ಶನಿವಾರ ಮನೆಯಿಂದ ಹೊರಗೆ ಹೋಗಿದ್ದ ಸಿದ್ದಲಿಂಗ ನಾಪತ್ತೆಯಾಗಿದ್ದರು. ಭಾನುವಾರ ಅವರು ಶವವಾಗಿ ಪತ್ತೆಯಾಗಿದ್ದಾರೆ.

ಸ್ನೇಹಿತರೇ ಸಿದ್ದಲಿಂಗ ಅವರನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಹತ್ಯೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

sswnews

https://sswnewskannada.com

Related Articles

Leave a Reply

Your email address will not be published. Required fields are marked *

Back to top button