ಜಿಲ್ಲಾಸುದ್ದಿ

ಮೂರು ಕಳ್ಳತನ ಪ್ರಕರಣ: ಆರೋಪಿಗಳ ಬಂಧನ, ₹6.80 ಲಕ್ಷ ಮೌಲ್ಯದ ಸ್ವತ್ತು ವಶ

ಬೀದರ್, ಅ.5– ಮೆಹಕರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೂರು ಕಳ್ಳತನ ಪ್ರಕರಣಗಳನ್ನು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ ₹6.80 ಲಕ್ಷ ಮೌಲ್ಯದ ವಾಹನ ಹಾಗೂ ಕೇಬಲ್‌ ತಂತಿಯನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ನೀಲಂಗಾ ಮೂಲದ ಸಚಿನ್ ಮತ್ತು ಯಶವಂತ ಎಂದು ಗುರುತಿಸಲಾಗಿದೆ.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪಾಧೀಕ್ಷಕ ಬಲ್ಲಪ್ಪ ನಂದಗಾವಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಸಿಪಿಐ ಹಣಮರಡ್ಡೆಪ್ಪ, ಪಿಎಸ್‌ಐ ಸುದರ್ಶನರೆಡ್ಡಿ ಹಾಗೂ ಸಿಬ್ಬಂದಿ ಬಸವನಗೌಡ, ಸಾಯಿಲುಗೌಡ, ಸ್ವಾಮಿದಾಸ, ಹನುಮಂತ, ಪ್ರದೀಪರೆಡ್ಡಿ ಮತ್ತು ಜೀಪ್ ಚಾಲಕ ಸೂರ್ಯಕಾಂತ ತಂಡದಲ್ಲಿದ್ದರು.

ನಗರದ ಸಿ.ಸಿ.ಟಿ.ವಿ. ನಿಯಂತ್ರಣ ಕೇಂದ್ರದಲ್ಲಿನ ಕ್ಯಾಮೆರಾ ದೃಶ್ಯಗಳು ಹಾಗೂ ಪೊಲೀಸ್ ಮಾಹಿತಿದಾರರಿಂದ ದೊರೆತ ಮಾಹಿತಿಯ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

ಆರೋಪಿಗಳಿಂದ ಕಳ್ಳತನಕ್ಕೆ ಬಳಸಿದ್ದ ಅಂದಾಜು ₹5 ಲಕ್ಷ ಮೌಲ್ಯದ ವಾಹನ ಹಾಗೂ ನೀರಿನ ಮೋಟಾರ್‌ಗಳಿಗೆ ಅಳವಡಿಸಿದ್ದ ೧,೦೯೦ ಮೀಟರ್ ಉದ್ದದ ಕೇಬಲ್‌ ತಂತಿಯನ್ನು ವಶಪಡಿಸಿಕೊಳ್ಳಲಾಗಿದೆ. ಕೇಬಲ್‌ ತಂತಿಯ ಅಂದಾಜು ಮೌಲ್ಯ ₹1.80 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ. ಒಟ್ಟು ₹6.80 ಲಕ್ಷ ಮೌಲ್ಯದ ಸ್ವತ್ತನ್ನು ಜಪ್ತಿ ಮಾಡಲಾಗಿದೆ.

ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪ್ರಕರಣವನ್ನು ತ್ವರಿತವಾಗಿ ಭೇದಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಶಂಸಿಸಿದ್ದಾರೆ.

ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಹಾಗೂ ಪತ್ತೆ ಕಾರ್ಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ತಿಳಿಸಿದ್ದಾರೆ.

sswnews

https://sswnewskannada.com

Related Articles

Leave a Reply

Your email address will not be published. Required fields are marked *

Back to top button