ಜಿಲ್ಲಾಸುದ್ದಿ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ: ಡಾ. ಅಲ್ಲಮಪ್ರಭು ಗುಡ್ಡಾ

ಬೀದರ್, ಅ.5– ಆಯುರ್ವೇದ ಚಿಕಿತ್ಸಾ ಪದ್ಧತಿಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರೆಯುತ್ತಿದ್ದು, ಈ ಕ್ಷೇತ್ರವು ವ್ಯಾಪಕವಾಗಿ ಬೆಳೆಯುತ್ತಿದೆ ಎಂದು ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದ ರಾಷ್ಟ್ರೀಯ ಭಾರತೀಯ ವೈದ್ಯಕೀಯ ಪದ್ಧತಿ ಆಯೋಗದ ಆಯುರ್ವೇದ ಮಂಡಳಿ ಅಧ್ಯಕ್ಷ ಡಾ. ಅಲ್ಲಮಪ್ರಭು ಗುಡ್ಡಾ ಹೇಳಿದರು.

ನಗರದ ದಂಬರ ಶಿಕ್ಷಣ ಸಂಸ್ಥೆ ನಡೆಸುತ್ತಿರುವ ಎನ್.ಕೆ. ಜಾಬಶೆಟ್ಟಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಪದವಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಹತ್ತು ವರ್ಷಗಳಲ್ಲಿ ಆಯುರ್ವೇದ ಚಿಕಿತ್ಸಾ ಪದ್ಧತಿ ಗಣನೀಯ ಪ್ರಗತಿ ಸಾಧಿಸಿದೆ. ಆಯುರ್ವೇದ ವೈದ್ಯಕೀಯ ಶಿಕ್ಷಣ ಹಾಗೂ ಚಿಕಿತ್ಸಾ ಕ್ಷೇತ್ರದಲ್ಲಿ ಎನ್.ಕೆ. ಜಾಬಶೆಟ್ಟಿ ಆಯುರ್ವೇದ ಕಾಲೇಜು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ದಂಬರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಶಿವಕುಮಾರ ಸ್ವಾಮೀಜಿ ಮಾತನಾಡಿ, ಆಯುರ್ವೇದ ವೈದ್ಯಕೀಯ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿವೆ. ವೈದ್ಯರು ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ಮೂಲಕ ವೃತ್ತಿಯ ಗೌರವ ಹೆಚ್ಚಿಸಬೇಕು. ತಮ್ಮ ಜ್ಞಾನ ಮತ್ತು ಸೇವೆಯ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ ಪಿಎಚ್.ಡಿ., ೧೬ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಹಾಗೂ ೬೯ ವಿದ್ಯಾರ್ಥಿಗಳಿಗೆ ಸ್ನಾತಕ ಪದವಿ ಪ್ರದಾನ ಮಾಡಲಾಯಿತು.

ದಂಬರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಬಿ.ಜಿ. ಶೆಟಕಾರ್, ಜಂಟಿ ಕಾರ್ಯದರ್ಶಿ ಮಡಿವಾಳಪ್ಪ ಗಂಗಶೆಟ್ಟಿ, ಸದಸ್ಯರಾದ ಶಿವಶರಣಪ್ಪ ಸಾವಳಗಿ, ಸುಭಾಷ್ ಉಪ್ಪೆ, ಉದಯಭಾನು ಸೂರ್ಯವಂಶಿ, ಸಹಜಾನಂದ ಕಂದಗೂಳ, ಸ್ವಾತ್ಮಾನಂದಗಿರಿ ಸ್ವಾಮೀಜಿ, ವಿನಾಯಕ ಶಿವಕುಮಾರ ಹಾಗೂ ಆಡಳಿತಾಧಿಕಾರಿ ಹಾವಗಿರಾವ್ ಮೈಲಾರೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಚಾರ್ಯ ಡಾ. ಚಂದ್ರಕಾಂತ ಹಳ್ಳಿ ಸ್ವಾಗತಿಸಿದರು. ಡಾ. ಶುಭದಾ ಹಾಗೂ ಡಾ. ಆಶಾರಾಣಿ ಕಾರ್ಯಕ್ರಮ ನಿರೂಪಿಸಿದರು. ಪಂಚಕರ್ಮ ವಿಭಾಗದ ಮುಖ್ಯಸ್ಥ ಡಾ. ಚೆನ್ನಬಸವಣ್ಣ ವಂದಿಸಿದರು.

sswnews

https://sswnewskannada.com

Related Articles

Leave a Reply

Your email address will not be published. Required fields are marked *

Back to top button