ಜಿಲ್ಲಾಸುದ್ದಿ

ಹಂಗರಗಾ (ಕೆ) ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸಂತೋಷಗೌಡ ಅವಿರೋಧ ಆಯ್ಕೆ

ಯಡ್ರಾಮಿ, ಅ. 6: ತಾಲ್ಲೂಕಿನ ಹಂಗರಗಾ (ಕೆ) ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹಂಗರಗಾ (ಬಿ) ಗ್ರಾಮದ ಯುವ ಮುಖಂಡ ಸಂತೋಷಗೌಡ ಜಿ. ಮಾಲಿ ಪಾಟೀಲ ಅವರು ಸರ್ವ ಸದಸ್ಯರ ಸರ್ವಾನುಮತದೊಂದಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಸಂತೋಷಗೌಡ ಜಿ. ಮಾಲಿ ಪಾಟೀಲ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದು, ಉಳಿದ ಎಲ್ಲ ಸದಸ್ಯರು ಚುನಾವಣೆಗೆ ಸ್ಪರ್ಧಿಸದಂತೆ ಮನವೊಲಿಸಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡುವ ತೀರ್ಮಾನ ಕೈಗೊಂಡ ಹಿನ್ನೆಲೆಯಲ್ಲಿ ಅವರ ಆಯ್ಕೆ ನಡೆಯಿತು.

ಸಂತೋಷಗೌಡ ಮಾಲಿ ಪಾಟೀಲ ಅವರು ಬಾಲ್ಯದಿಂದಲೇ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದು, ಸದಾ ಕ್ರಿಯಾಶೀಲ ವ್ಯಕ್ತಿಯಾಗಿ ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹಲವು ವರ್ಷಗಳಿಂದ ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವ ಅವರು ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ಅಧ್ಯಕ್ಷರ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮಾಜಿ ಶಾಸಕರಾದ ಹಾಗೂ ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷ ದೊಡ್ಡಪ್ಪಗೌಡ ಎಸ್. ಪಾಟೀಲ ನರಿಬೋಳ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಸವರಾಜ ಎಸ್. ಪಾಟೀಲ ನರಿಬೋಳ ಅವರು ರೇವಪ್ಪಗೌಡ ಬಿರಾದಾರ ಹಂಗರಗಾ (ಬಿ), ಮಾಜಿ ಅಧ್ಯಕ್ಷ ಮಹಾಂತಪ್ಪ ದೊರೆ, ಶರಣಪ್ಪ, ಅಪ್ಪಾಸಾಹೇಬ, ಚಂದ್ರಕಾಂತ ಸೇರಿದಂತೆ ಸಂಘದ ಎಲ್ಲ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

ಚುನಾವಣೆಯಲ್ಲಿ ಸ್ಪರ್ಧಿಸದೆ ಸಂತೋಷಗೌಡ ಮಾಲಿ ಪಾಟೀಲ ಅವರನ್ನು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡುವಂತೆ ಮನವಿ ಮಾಡಲಾಗಿದ್ದು, ಸಂಘದ ಎಲ್ಲ ಸದಸ್ಯರೂ ಇದಕ್ಕೆ ಒಪ್ಪಿಗೆ ಸೂಚಿಸಿದರು. ಹೀಗಾಗಿ ಸಂತೋಷಗೌಡ ಮಾಲಿ ಪಾಟೀಲ ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ರೇವಪ್ಪಗೌಡ ಬಿರಾದಾರ ಹಂಗರಗಾ (ಬಿ), ಮಾಜಿ ಅಧ್ಯಕ್ಷ ಮಹಾಂತಪ್ಪ ದೊರೆ, ಶರಣಪ್ಪ, ಅಪ್ಪಾಸಾಹೇಬ, ಚಂದ್ರಕಾಂತ, ಕಾರ್ಯದರ್ಶಿ ಗೌಡಪ್ಪ, ಶಾಂತಪ್ಪ ಹುಲಸೂರು, ಅಣ್ಣ ಎಂ. ಭೈರಡಗಿ ಸೇರಿದಂತೆ ಸಂಘದ ಸದಸ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.

sswnews

https://sswnewskannada.com

Related Articles

Leave a Reply

Your email address will not be published. Required fields are marked *

Back to top button