ಅಪಘಾತ

ಮಾಡಿಯಾಳದಲ್ಲಿ ಜಾತ್ರೆ ಜಗಳ: ಯುವಕನ ಕೊಲೆಯಲ್ಲಿ ಅಂತ್ಯ

ಕಲಬುರಗಿ, ಅ.7- ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಆಳಂದ ತಾಲ್ಲೂಕಿನ ಮಾಡಿಯಾಳ ಗ್ರಾಮದಲ್ಲಿ ನಡೆದಿದೆ.

ಮೃತನನ್ನು ಮಾಡಿಯಾಳ ಗ್ರಾಮದ ನಿವಾಸಿ ಸಂತೋಷ ನಿಂಬಾಳ (35) ಎಂದು ಗುರುತಿಸಲಾಗಿದೆ.

ಸುಮಾರು ಎರಡು ತಿಂಗಳ ಹಿಂದೆ ಜಾತ್ರೆಯ ಸಂದರ್ಭದಲ್ಲಿ ನಡೆದಿದ್ದ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಇದೀಗ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಂತೋಷ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಸಂತೋಷ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಕುರಿತು ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಗೆ ನಿಖರ ಕಾರಣ ಹಾಗೂ ಕೊಲೆಯಲ್ಲಿ ಭಾಗಿಯಾಗಿರುವವರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

sswnews

https://sswnewskannada.com

Related Articles

Leave a Reply

Your email address will not be published. Required fields are marked *

Back to top button