ಜಿಲ್ಲಾಸುದ್ದಿ

ಜೇವರ್ಗಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ ಆರಂಭ

ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ 8762767573 ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಲು ಮನವಿ

ಜೇವರ್ಗಿ, ಅ. 29: ಜೇವರ್ಗಿ ತಾಲೂಕಿನಲ್ಲಿ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ತ್ವರಿತವಾಗಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಕುಡಿಯುವ ನೀರಿನ ಸಹಾಯವಾಣಿ ಆರಂಭಿಸಲಾಗಿದೆ.

ತಾಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಸಾರ್ವಜನಿಕರು 8762767573 ದೂರವಾಣಿ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಬಹುದು. ಅಥವಾ ತಾಲೂಕು ಪಂಚಾಯಿತಿ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಸಮಸ್ಯೆಯನ್ನು ತಿಳಿಸಬಹುದು. ದೂರುಗಳ ಆಧಾರದ ಮೇಲೆ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ಕೌಲಗಿ ತಿಳಿಸಿದ್ದಾರೆ.

ಬರ ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನೀರಿನ ಸಮಸ್ಯೆ ಎದುರಾದ ಸ್ಥಳಗಳಿಗೆ ಶೀಘ್ರವಾಗಿ ಪರಿಹಾರ ಒದಗಿಸುವುದು ಈ ಸಹಾಯವಾಣಿಯ ಉದ್ದೇಶವಾಗಿದೆ.

sswnews

https://sswnewskannada.com

Related Articles

Leave a Reply

Your email address will not be published. Required fields are marked *

Back to top button