ಜಿಲ್ಲಾಸುದ್ದಿ

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಾಳೆ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಜನ್ಮದಿನಾಚರಣೆ

ಕಲಬುರಗಿ, ನ.9: ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ನವೆಂಬರ್ 11ರಂದು ಬೆಳಿಗ್ಗೆ 10 ಗಂಟೆಗೆ ಸ್ವಾತಂತ್ರ್ಯ ಹೋರಾಟಗಾರ ಹಾಗೂ ದೇಶದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಜನ್ಮದಿನವನ್ನು ಆಚರಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಕಿರಣ್ ದೇಶಮುಖ್ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರು, ಪಕ್ಷದ ಮುಖಂಡರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಲಿದ್ದಾರೆ.

ಅಲ್ಲದೆ, ಜಿಲ್ಲಾ ಕಾಂಗ್ರೆಸ್ ಸಮಿತಿಯ ವಿವಿಧ ಘಟಕಗಳ ಮಾಜಿ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಜಿಲ್ಲಾ ಚುನಾವಣಾ ಪ್ರತಿನಿಧಿಗಳು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಿವಿಧ ಮುಂಚೂಣಿ ಘಟಕಗಳು ಮತ್ತು ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೂ ಆಹ್ವಾನ ನೀಡಲಾಗಿದೆ.

ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಹಾಲಿ ಹಾಗೂ ಮಾಜಿ ಚುನಾಯಿತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಹಾಗೂ ಸದಸ್ಯರು, ಮಹಿಳಾ ಮತ್ತು ಯುವ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಪಕ್ಷದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಡಾ. ಕಿರಣ್ ದೇಶಮುಖ್ ಮನವಿ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button