ಜಿಲ್ಲಾಸುದ್ದಿ

ಸಾಲಬಾಧೆ: ಮಂದೇವಾಳದಲ್ಲಿ ರೈತ ಆತ್ಮಹತ್ಯೆ

ಜೇವರ್ಗಿ, ನ.10: ಸಾಲಬಾಧೆಯಿಂದ ಮನನೊಂದ ರೈತರೊಬ್ಬರು ತಮ್ಮ ಹೊಲದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಮಂದೇವಾಳ ಗ್ರಾಮದಲ್ಲಿ ವರದಿಯಾಗಿದೆ.

ಮೃತ ರೈತನನ್ನು ಗ್ರಾಮದ ಶಿವಶರಣಪ್ಪ ತಂದೆ ಪೀರಪ್ಪ ಸುಂಟಾಣ (60) ಎಂದು ಗುರುತಿಸಲಾಗಿದೆ. ಮೃತರು ಐವರು ಪುತ್ರಿಯರು ಹಾಗೂ ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಶಿವಶರಣಪ್ಪ ಅವರು ಖಾಸಗಿ ವ್ಯಕ್ತಿಗಳಿಂದ ಸುಮಾರು ಆರು ಲಕ್ಷ ರೂಪಾಯಿ ಹಾಗೂ ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ಎರಡು ಲಕ್ಷ ರೂಪಾಯಿ ಸೇರಿದಂತೆ ಒಟ್ಟು ಎಂಟು ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

ಈ ಬಾರಿ ಮಳೆಯಾಗದೆ ಬೆಳೆ ಕೈಕೊಟ್ಟಿದ್ದರಿಂದ ಸಾಲ ಮರುಪಾವತಿ ಮಾಡುವ ಚಿಂತೆಯಲ್ಲಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button