ಜಿಲ್ಲಾಸುದ್ದಿ

ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ಕೇಂದ್ರದ ವಿರುದ್ಧ ಶಾಸಕ ಬಿ.ಆರ್. ಪಾಟೀಲರ ಧರಣಿ

ಕಲಬುರಗಿ, ನ. 10: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿದ್ದರೂ ಕೇಂದ್ರ ಸರ್ಕಾರ ಬರ ಪರಿಹಾರ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಆಳಂದ ಶಾಸಕ ಬಿ.ಆರ್. ಪಾಟೀಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಗಮನ ಸೆಳೆಯಲು ನವೆಂಬರ್ 11ರಂದು ಕಲಬುರಗಿ ನಗರದ ಉದ್ಯಾನವನದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ತೀವ್ರ ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿದೆ. ರಾಜ್ಯದ 226 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದೆ. ಬರದಿಂದ ತೊಂದರೆಗೊಳಗಾಗಿರುವ ರೈತರ ನೆರವಿಗಾಗಿ ಕೇಂದ್ರ ಸರ್ಕಾರದಿಂದ ₹22,400 ಕೋಟಿ ಬರ ಪರಿಹಾರ ಅನುದಾನ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. ಆದರೆ, ರೈತರ ಸಂಕಷ್ಟಕ್ಕೆ ಕೇಂದ್ರದಿಂದ ಸೂಕ್ತ ಸ್ಪಂದನೆ ದೊರೆತಿಲ್ಲ ಎಂದು ಅವರು ದೂರಿದ್ದಾರೆ.

ಕೇಂದ್ರ ಸರ್ಕಾರದ ಗಮನ ಸೆಳೆದು ರಾಜ್ಯದ ರೈತರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಬರ ಪರಿಹಾರ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ನವೆಂಬರ್ 11ರಂದು ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ ಎಂದು ಶಾಸಕ ಬಿ.ಆರ್. ಪಾಟೀಲ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button