ಜಿಲ್ಲಾಸುದ್ದಿ
ಮನೆ ಮುಂದೆ ನಿಲ್ಲಿಸಿದ್ದ ಮೂರು ಬೈಕ್‌ಗಳಿಗೆ ಬೆಂಕಿ: ಸುಟ್ಟು ಕರಕಲಾದ ವಾಹನಗಳು

ಚಿಟಗುಪ್ಪ, ನ. 10: ಪಟ್ಟಣದ ಮಾರ್ಕಂಡೇಶ್ವರ ದೇವಸ್ಥಾನದ ಸಮೀಪ ದುಷ್ಕರ್ಮಿಗಳು ಮನೆ ಮುಂದೆ ನಿಲ್ಲಿಸಿದ್ದ ಮೂರು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಬೆಂಕಿಯ ತೀವ್ರತೆಗೆ ಮೂರು ಬೈಕ್‌ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.
ಸುಟ್ಟುಹೋದ ಮೂರು ಬೈಕ್‌ಗಳ ಅಂದಾಜು ಮೌಲ್ಯ ಸುಮಾರು ಒಂದು ಲಕ್ಷ ರೂಪಾಯಿಗೂ ಅಧಿಕ ಎಂದು ತಿಳಿದುಬಂದಿದೆ. ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿಯೇ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.
ಘಟನೆಗೆ ಸಂಬಂಧಿಸಿದಂತೆ ಬೈಕ್‌ಗಳ ಮಾಲೀಕರು ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದು, ಕೃತ್ಯ ಎಸಗಿದವರನ್ನು ಶೀಘ್ರ ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
