ಜಿಲ್ಲಾಸುದ್ದಿ

ಸಾರಿಗೆ ನಿಗಮದ ಅಧಿಕಾರಿಗಳೊಂದಿಗೆ ಅರುಣಕುಮಾರ್ ಎಂ.ವೈ. ಪಾಟೀಲ್ ಪ್ರಗತಿ ಪರಿಶೀಲನಾ ಸಭೆ

ಬೀದರ್, ನ.11: ನಗರದ ವಿಭಾಗೀಯ ಕಚೇರಿಯಲ್ಲಿ ಬುಧವಾರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ್ ಎಂ.ವೈ. ಪಾಟೀಲ್ ಅವರು ನಿಗಮದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ಬಸ್‌ಗಳ ಇಂಧನ ದಕ್ಷತೆ ಹೆಚ್ಚಿಸುವುದು, ಡೀಸೆಲ್ ಉಳಿತಾಯ, ಆದಾಯ ವೃದ್ಧಿ, ಕಾರ್ಯಾಚರಣೆಯ ವೆಚ್ಚ ಕಡಿತ, ವಾಹನಗಳ ಸಮರ್ಪಕ ನಿರ್ವಹಣೆ ಹಾಗೂ ಸಮಯಪಾಲನೆ ಸೇರಿದಂತೆ ನಿಗಮದ ಕಾರ್ಯಕ್ಷಮತೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ವಿಶೇಷ ಆದ್ಯತೆ ನೀಡುವಂತೆ ಸೂಚಿಸಿದ ಅವರು, ಚಾಲಕರಿಗೆ ರಸ್ತೆ ಸುರಕ್ಷತಾ ತರಬೇತಿ ನೀಡುವುದು, ಸಂಚಾರ ನಿಯಮಗಳ ಪಾಲನೆ, ವಾಹನಗಳ ತಾಂತ್ರಿಕ ತಪಾಸಣೆ ಹಾಗೂ ಅಪಘಾತ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಿಗಮದ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದರ ಜೊತೆಗೆ ಪ್ರಯಾಣಿಕರಿಗೆ ಸುರಕ್ಷಿತ, ಸುಗಮ ಹಾಗೂ ಸಮಯಬದ್ಧ ಸಾರಿಗೆ ಸೇವೆ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅರುಣಕುಮಾರ್ ಎಂ.ವೈ. ಪಾಟೀಲ್ ತಿಳಿಸಿದರು.

ಈ ಸಂದರ್ಭದಲ್ಲಿ ಬೀದರ್ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಂದ್ರ ಜಾಧವ್, ವಿಭಾಗೀಯ ಸಂಚಾರಾಧಿಕಾರಿ ಶಾರದಾ ಸೇರಿದಂತೆ ವಿಭಾಗದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button