ಜಿಲ್ಲಾಸುದ್ದಿ

ತಾಡತೇನೂರು ವಕ್ಫ್‌ ಜಮೀನು ಖಾಸಗಿ ವ್ಯಕ್ತಿಗೆ ವರ್ಗಾವಣೆ: ಕ್ರಮಕ್ಕೆ ಆಗ್ರಹ

ಅಕ್ರಮ ವರ್ಗಾವಣೆ ಕುರಿತು ತನಿಖೆ ನಡೆಸಿ ಜಮೀನು ಮರಳಿ ವಕ್ಫ್‌ ಮಂಡಳಿಗೆ ಹಸ್ತಾಂತರಿಸಲು ಒತ್ತಾಯ

ಕಲಬುರಗಿ, ನ.17: ತಾಲ್ಲೂಕಿನ ತಾಡತೇನೂರು ಗ್ರಾಮದ ಸರ್ವೆ ನಂ.7ರ ಹಿಸ್ಸಾ 01ರ ವಕ್ಫ್‌ ಮಂಡಳಿಗೆ ಸೇರಿದ ಜಮೀನನ್ನು ಖಾಸಗಿ ವ್ಯಕ್ತಿಯ ಹೆಸರಿಗೆ ವರ್ಗಾವಣೆ ಮಾಡಿರುವುದು ಕಾನೂನುಬಾಹಿರವಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಜಮೀನನ್ನು ಮರಳಿ ವಕ್ಫ್‌ ಮಂಡಳಿಗೆ ಹಸ್ತಾಂತರಿಸಬೇಕು ಎಂದು ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ರಮಾಕಾಂತ ವಿ. ಪೂಜಾರಿ ಒತ್ತಾಯಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿರುವ ಅವರು, ವಕ್ಫ್‌ ಮಂಡಳಿಗೆ ಸೇರಿದ ಆಸ್ತಿಯನ್ನು ಸುಮಲತಾ ಐ. ವಳಕೇರಿ ಅವರ ಹೆಸರಿಗೆ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ವಕ್ಫ್‌ ಮಂಡಳಿಗೆ ಸೇರಿದ ಆಸ್ತಿಯನ್ನು ಖಾಸಗಿ ವ್ಯಕ್ತಿಯ ಹೆಸರಿಗೆ ವರ್ಗಾವಣೆ ಮಾಡಿರುವುದು ಕಾನೂನುಬಾಹಿರವಾಗಿದೆ. ಈ ವರ್ಗಾವಣೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಸಮಗ್ರ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೆ, ವರ್ಗಾವಣೆಗೊಂಡಿರುವ ಜಮೀನನ್ನು ಮರಳಿ ವಕ್ಫ್‌ ಮಂಡಳಿಗೆ ಹಸ್ತಾಂತರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಮನವಿಗೆ ಸ್ಪಂದಿಸದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಸಮಾಜದ ಹಿರಿಯ ಮುಖಂಡರಾದ ನಾಗಪ್ಪ ಟೈಗರ್, ಸತೀಶ ರಾಠೋಡ್, ಸಚಿನ್ ರಿಲ್ವನ್, ಮಲ್ಲಿಕಾರ್ಜುನ ಆಲಗೂಡ, ಮನೋಜ್ ನಟಕಾರ ಹಾಗೂ ಸಂತೋಷ ಗಡಸೆ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button