ಧಾರ್ಮಿಕಸಮಾಜ

ಮಳೆಯಿಗಾಗಿ ಈದ್ಗಾ ಮೈದಾನದಲ್ಲಿ ವಿಶೇಷ ಪ್ರಾರ್ಥನೆ

ಉತ್ತಮ ಮಳೆ ಹಾಗೂ ಸಮೃದ್ಧ ಬೆಳೆಗಾಗಿ ಸಾರ್ವಜನಿಕರೊಂದಿಗೆ ಶಾಸಕ ರಹೀಂ ಖಾನ್ ಪ್ರಾರ್ಥನೆ

ನಗರದ ಸುನ್ನಿ ಈದ್ಗಾ ಮೈದಾನದಲ್ಲಿ ಭಾನುವಾರ ಉತ್ತಮ ಮಳೆಯಾಗಲಿ ಹಾಗೂ ಸಮೃದ್ಧ ಬೆಳೆ ಬೆಳೆಯಲಿ ಎಂಬ ಆಶಯದೊಂದಿಗೆ ವಿಶೇಷ ಪ್ರಾರ್ಥನೆ ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ರಹೀಂ ಖಾನ್ ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಭಾಗವಹಿಸಿ, ಉತ್ತಮ ಮಳೆ ಸುರಿದು ರೈತರು ಸಮೃದ್ಧಿಯಾಗಲಿ, ಬೆಳೆಗಳು ಉತ್ತಮವಾಗಿ ಬೆಳೆಯಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಇದಕ್ಕೂ ಮುನ್ನ ಸಾರ್ವಜನಿಕರು ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಈದ್ಗಾ ಮೈದಾನದವರೆಗೆ ಪಾದಯಾತ್ರೆ ನಡೆಸಿ, ಬಳಿಕ ಸಾಮೂಹಿಕವಾಗಿ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಪ್ರಾರ್ಥನೆಯಲ್ಲಿ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಲಿ, ರೈತರ ಬದುಕು ಹಸನಾಗಲಿ ಹಾಗೂ ಎಲ್ಲೆಡೆ ಸುಭಿಕ್ಷ ನೆಲೆಸಲಿ ಎಂದು ಪ್ರಾರ್ಥಿಸಲಾಯಿತು.

Related Articles

Leave a Reply

Your email address will not be published. Required fields are marked *

Back to top button