ಜಿಲ್ಲಾಸುದ್ದಿಸಮಾಜ

ಹಡಪದ ಸಮಾಜದ ಬೇಡಿಕೆಗಳನ್ನು ಮುಂಗಾರು ಅಧಿವೇಶನದಲ್ಲಿ ಪ್ರಸ್ತಾಪಿಸಿ: ಮತ್ತಿಮೂಡರಿಗೆ ಮನವಿ

ಹಡಪದ ಅಪ್ಪಣ್ಣ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಿ ₹100 ಕೋಟಿ ಅನುದಾನ ನೀಡಲು ಒತ್ತಾಯ

ಕಲಬುರಗಿ: 2026ನೇ ಸಾಲಿನ ಮುಂಗಾರು ಅಧಿವೇಶನದಲ್ಲಿ ಹಡಪದ ಅಪ್ಪಣ್ಣ ಸಮಾಜದ ಪ್ರಮುಖ ಬೇಡಿಕೆಗಳನ್ನು ಪ್ರಸ್ತಾಪಿಸಿ, ಸಮಾಜದ ಧ್ವನಿಯಾಗಿ ಮಾತನಾಡುವಂತೆ ಒತ್ತಾಯಿಸಿ ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ವತಿಯಿಂದ ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ರಾಜ್ಯ ಸರ್ಕಾರ ಸಣ್ಣ ಸಣ್ಣ ಕಾಯಕ ಸಮಾಜಗಳ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸಬೇಕು. ನೀಡುವ ಆಶ್ವಾಸನೆಗಳು ಕೇವಲ ಭರವಸೆಗಳಾಗಿ ಉಳಿಯದೆ, ಕೊಟ್ಟ ಮಾತಿನಂತೆ ಸಮಾಜಗಳಿಗೆ ನ್ಯಾಯ ದೊರಕಿಸಿಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಬೇಕು ಎಂದು ಸಮಾಜದ ಮುಖಂಡರು ಒತ್ತಾಯಿಸಿದರು.

ಹಡಪದ ಅಪ್ಪಣ್ಣ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಿ ₹100 ಕೋಟಿ ಅನುದಾನ ಮೀಸಲಿಡಬೇಕು. ಜಾತಿ ನಿಂದನೆಗೆ ಕಡಿವಾಣ ಹಾಕಲು ಕಠಿಣ ಕಾನೂನು ಜಾರಿಗೆ ತರಬೇಕು. ಜಾತಿ ನಿಂದನೆ ಪ್ರಕರಣಗಳನ್ನು ಅಟ್ರಾಸಿಟಿ ಕಾಯ್ದೆಯಡಿ ದಾಖಲಿಸುವಂತಾಗಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಬಸವಕಲ್ಯಾಣದಲ್ಲಿರುವ ಬಸವಣ್ಣನವರ ಅರಿವಿನ ಮನೆಯ ಗವಿಯ ಪಕ್ಕದಲ್ಲಿರುವ ನಿಜಸುಖಿ ಹಡಪದ ಅಪ್ಪಣ್ಣನವರ ಗವಿ (ಅರಿವಿನ ಮನೆ)ಯನ್ನು ಅಭಿವೃದ್ಧಿಪಡಿಸಬೇಕು. ಅಲ್ಲದೆ, ನಿಜಸುಖಿ ಹಡಪದ ಅಪ್ಪಣ್ಣನವರ ಗವಿಯ ಸ್ಥಳದಲ್ಲಿ ಅನ್ಯ ಮೂರ್ತಿಯನ್ನು ರಾತ್ರೋರಾತ್ರಿ ಸ್ಥಾಪಿಸಿರುವ ಕುರಿತು ಸೂಕ್ತ ತನಿಖೆ ನಡೆಸಿ, ಬಸವಾದಿ ಕಾಯಕ ಶರಣರಾದ ನಿಜಸುಖಿ ಹಡಪದ ಅಪ್ಪಣ್ಣನವರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಲಾಯಿತು.

ಸಣ್ಣ ಸಣ್ಣ ಕಾಯಕ ಶರಣರಿಗೆ ಅನ್ಯಾಯ ಮಾಡಬಾರದು. ಕಾಯಕ ಶರಣರ ಇತಿಹಾಸ, ಪರಂಪರೆ ಹಾಗೂ ಸ್ಮಾರಕಗಳನ್ನು ಸಂರಕ್ಷಿಸಿ ಗೌರವಿಸಬೇಕು. ಸಮಾಜದ ಬೇಡಿಕೆಗಳನ್ನು ಮುಂಗಾರು ಅಧಿವೇಶನದಲ್ಲಿ ಪ್ರಸ್ತಾಪಿಸಿ, ಹಡಪದ ಸಮಾಜದ ಪರವಾಗಿ ಧ್ವನಿ ಎತ್ತಬೇಕು ಹಾಗೂ ಪ್ರತ್ಯೇಕ ಅಭಿವೃದ್ಧಿ ನಿಗಮಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಶಾಸಕ ಬಸವರಾಜ ಮತ್ತಿಮೂಡ ಅವರಿಗೆ ಮನವಿ ಮಾಡಲಾಯಿತು.

ಕಲಬುರಗಿ ಜಿಲ್ಲೆಯ ಹಡಪದ ಸಮಾಜದ ಜಿಲ್ಲಾಧ್ಯಕ್ಷ ಈರಣ್ಣ ಸಿ. ಹಡಪದ ಸಣ್ಣೂರ, ಸುನೀಲ್ ಕುಮಾರ್ ಭಾಗಹಿಪ್ಪರರ್ಗಾ ಸೇರಿದಂತೆ ಸಮಾಜದ ಮುಖಂಡರು ಶಾಸಕ ಬಸವರಾಜ ಮತ್ತಿಮೂಡ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಾಜದ ಅನೇಕ ಮುಖಂಡರು ಹಾಗೂ ಸಮಾಜದ ಬಂಧುಗಳು ಉಪಸ್ಥಿತರಿದ್ದರು.

“ಹಡಪದ ಸಮಾಜದ ನ್ಯಾಯಯುತ ಬೇಡಿಕೆಗಳಿಗೆ ಧ್ವನಿಯಾಗಿ—ಕಾಯಕ ಶರಣರ ಗೌರವ ಮತ್ತು ಹಕ್ಕುಗಳನ್ನು ರಕ್ಷಿಸಬೇಕು” ಎಂದು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ. ಹಡಪದ ಸುಗೂರ ಎನ್. ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button